‘ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹೋಗಲ್ಲ’- ಯತ್ನಳ್

ಬೆಳಗಾವಿ: ಕರ್ನಾಟಕ ಬಿಜೆಪಿ ಅಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕನ ಆಯ್ಕೆಯಾಗಿದೆ. ಆದರೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಅಸಮಾಧಾನ ಮಾತ್ರ ಇನ್ನೂ ಕಡಿಮೆಯಾದಂತೆ ಕಾಣುತ್ತಿಲ್ಲ.

ವಿಪಕ್ಷ ನಾಯಕ ಅಥವಾ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕದವರಿಗೆ ನೀಡಬೇಕೆಂದು ಯತ್ನಾಳ್ ಅವರ ಆಗ್ರಹವಾಗಿದ್ದು, ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಜೆಪಿ ಶಾಸಕಾಂಗ ಸಭೆಗೆ ಹೋಗಲ್ಲ ಎಂದು ಖಡಕ್ ಆಗಿ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಉತ್ತರ ಕರ್ನಾಟಕ ಭಾಗದ ಜನರ ಸಮಸ್ಯೆ ಬಗ್ಗೆ ಚರ್ಚೆ ಆಗಲಿ. ದಕ್ಷಿಣ ಕರ್ನಾಟಕಕ್ಕೆ ನ್ಯಾಯ ಕೊಟ್ಟರು, ಆ ಭಾಗದ ನಾಯಕರಿಗೆ ನಾವು ಗುಲಾಮರಲ್ಲ. ಉತ್ತರ ಕರ್ನಾಟಕಕ್ಕೆ ನ್ಯಾಯ ಕೊಡುವವರೆಗೂ ಬಿಎಲ್​ ಪಿ ಸಭೆಗೆ ಬರಲ್ಲ ಎಂದು ಹೇಳಿದರು.

Advertisement

ಬಹಳಷ್ಟು ಅನಕೂಲ ಇದ್ದವರಿಗೆ ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ನಾಯಕನನ್ನು ಮಾಡುತ್ತಾರೆ. ರಾಜ್ಯದ ಜನರ ದೃಷ್ಟಿಯಲ್ಲಿ ನಾನು ರಾಜ್ಯಾಧ್ಯಕ್ಷ ಹಾಗೂ ವಿರೋಧ ಪಕ್ಷದ ನಾಯಕ ಆಗಲು ಸಮರ್ಥನಾಗಿದ್ದೇನೆ. ಉತ್ತರ ಕರ್ನಾಟಕ ಭಾಗಕ್ಕೆ ರಾಜ್ಯಾಧ್ಯಕ್ಷ ಮತ್ತು ವಿರೋಧ ಪಕ್ಷದ ನಾಯಕ ಸ್ಥಾನ ಸಿಗಲೇಬೇಕು. ಅದಕ್ಕೆ ನಾನು ಯಾರ ಮುಲಾಜಿಗೂ ಹೆದರುವುದಿಲ್ಲ. ಉತ್ತರ ಕರ್ನಾಟಕಕ್ಕೆ ಅಪಮಾನ ಮಾಡಲಾಗಿದೆ. ರಾಜ್ಯಾಧ್ಯಕ್ಷ, ವಿರೋಧ ಪಕ್ಷದ ಸ್ಥಾನ ಬದಲಾಗುವವರೆಗೂ ನಾನು ಶಾಸಕಾಂಗ ಸಭೆಗೆ ಹೋಗುವುದಿಲ್ಲ ಎಂದು ಹೇಳಿದರು.

ನಾನು ರಾಜ್ಯಾಧ್ಯಕ್ಷನಾಗುವುದಕ್ಕೆ ಎಲ್ಲಾ ರೀತಿಯ ಅರ್ಹತೆ ಇದೆ. ನಾನು ಒಬ್ಬ ಸಾಮಾನ್ಯ ಕಾರ್ಯಕರ್ತ, ನಾನು ಯಾವುದೇ ಭ್ರಷ್ಟಾಚಾರ ಮಾಡಿಲ್ಲ. ನಮ್ಮ ಅಪ್ಪ ಮುಖ್ಯಮಂತ್ರಿಯಲ್ಲ. ನಾನು ಯಾವುದೇ ಸರ್ಕಾರಿ ಭೂಮಿ ಲೂಟಿ ಮಾಡಿಲ್ಲ. ಉತ್ತರ ಕರ್ನಾಟಕಕ್ಕೆ ಅನ್ಯಾಯ ಆಗಿದೆ. ಉತ್ತರ ಕರ್ನಾಟಕದ ಎಮ್ ಎಲ್ ಎಗಳು, ಎಂಪಿಗಳು ನಿಮಗೆ ಬೇಕು. ಆದರೆ ರಾಜ್ಯಾಧ್ಯಕ್ಷ ವಿರೋಧ ಪಕ್ಷದ ನಾಯಕ ಆ ಹಳೆ ಮೈಸೂರು ಬಾಗದವರು ಆಗಬೇಕು ಎಂದು ಸ್ವಪಕ್ಷದ ವಿರುದ್ಧ ಕಿಡಿಕಾರಿದರು.

Add a comment

Leave a Reply

Your email address will not be published. Required fields are marked *

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement