ದಾವಣಗೆರೆ; ಮಲೆಬೆನ್ನೂರು ಪುರಸಭೆ ವ್ಯಾಪ್ತಿಯಲ್ಲಿ 2021-22ನೇ ಸಾಲಿನ ಮುಖ್ಯಮಂತ್ರಿಗಳ ಅಮೃತ ನಗರೋತ್ಥಾನ ಯೋಜನೆಯಡಿ ಮಂಜೂರಾದ ಮೊತ್ತದಲ್ಲಿ ವಿವಿಧ ಸೌಲಭ್ಯಗಳನ್ನು ಪಡೆಯಲು ಮಲೆಬೆನ್ನೂರು ಪಟ್ಟಣ ನಿವಾಸಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಫಲಾನುಭವಿಗಳು ಆಗಸ್ಟ್ 11 ರೊಳಗೆ ಕಚೇರಿಯಿಂದ ಅರ್ಜಿ ಪಡೆದು ಆಧಾರ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಬ್ಯಾಂಕ್ ಪಾಸ್‍ಬುಕ್, ಪಾಸ್‍ಪೋರ್ಟ್ ಅಳತೆಯ ಭಾವಚಿತ್ರ ಹಾಗೂ ವಿದ್ಯಾರ್ಥಿಗಳಾಗಿದ್ದಲ್ಲಿ 2020-21 ಮತ್ತು 2021-22ನೇ ಸಾಲಿನಲ್ಲಿ ಉತ್ತೀರ್ಣರಾದ ಬಗ್ಗೆ ದೃಢೀಕೃತ ಅಂಕಪಟ್ಟಿಯೊಂದಿಗೆ ಸೆಪ್ಟಂಬರ್ 4 ರೊಳಗಾಗಿ ಸಲ್ಲಿಸಬೇಕು ಎಂದು ಮಲೆಬೆನ್ನೂರು ಪುರಸಭೆ ಮುಖ್ಯಾಧಿಕಾರಿ ಸುರೇಶ್.ಎ ತಿಳಿಸಿದ್ದಾರೆ.