ನಾಲಿಗೆಯ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಎರಡೂವರೆ ವರ್ಷದ ಬಾಲಕನಿಗೆ ಸುನ್ನತ್ ಮಾಡಿದ ಆರೋಪ ಉತ್ತರ ಪ್ರದೇಶದ ಬರೇಲಿಯಲ್ಲಿ ಕೇಳಿಬಂದಿದೆ. ಹೀಗಾಗಿ ಇಲ್ಲಿನ ಖಾಸಗಿ ಆಸ್ಪತ್ರೆಯ ಲೈಸೆನ್ಸ್ ಅನ್ನು ಅಮಾನತುಗೊಳಿಸಲಾಗಿದೆ.
ಬರೇಲಿಯ ಖಾಸಗಿ ಆಸ್ಪತ್ರೆಯ ವಿರುದ್ಧ ಕೇಳಿಬಂದ ಆರೋಪ ಕುರಿತು ತನಿಖೆ ನಡೆಸಿದ ಆರೋಗ್ಯ ಇಲಾಖೆ ಅಧಿಕಾರಿಗಳು, ಮೇಲ್ನೋಟಕ್ಕೆ ತಪ್ಪು ಎಸಗಿರುವುದು ಗೋಚರಿಸಿದ ಹಿನ್ನೆಲೆಯಲ್ಲಿ ಲೈಸೆನ್ಸನ್ನು ಅಮಾನತುಗೊಳಿಸಿದ್ದಾರೆ. ಇದರಿಂದಾಗಿ ಆಸ್ಪತ್ರೆ ಹೊಸ ರೋಗಿಗಳನ್ನು ದಾಖಲು ಮಾಡಿಕೊಂಡು, ಚಿಕಿತ್ಸೆ ನೀಡುವಂತಿಲ್ಲ. ತನಿಖೆಯಲ್ಲಿ ಆರೋಪ ಸಾಬೀತಾದರೆ ತೆಗೆದುಕೊಳ್ಳಲಾಗುತ್ತದೆ ಎಂದು ಮುಖ್ಯ ಆರೋಗ್ಯಾಧಿಕಾರಿ
ಬಲಬೀರ್ ಸಿಂಗ್ ತಿಳಿಸಿದ್ದಾರೆ.
ಬಾಲಕ ತೊದಲಿಸುತ್ತಿದ್ದ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗೆ ಸೂಚಿಸಲಾಗಿತ್ತು. ಅದರಂತೆ ಆಸ್ಪತ್ರೆಗೆ ಕರೆದೊಯ್ದಾಗ ಸರ್ಜರಿ ನಡೆದಿತ್ತು. ಆವಾಗ ವೈದ್ಯರು ನಾಲಿಗೆಯ ಬದಲು ಜನನಾಂಗದ ಮುಂಭಾಗವನ್ನು ಕತ್ತರಿಸಿದ್ದರು ಎಂದು ಆರೋಪಿಸಲಾಗಿದೆ.
ಅಪರೇಷನ್ ಮುಂಚೆ ಪಡೆಯುವ ದಾಖಲೆಗಳು ಇಂಗ್ಲಿಷ್‌ನಲ್ಲಿ ಇದ್ದುದ್ದರಿಂದ ತಮಗೆ ಏನೂ ಗೊತ್ತಾಗಲಿಲ್ಲ ಎಂದು ಪೋಷಕರು ದೂರಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಹಿಂದು ಸಂಘಟನೆಗಳು ಜಮಾವಣೆಗೊಂಡು ಆಸ್ಪತ್ರೆ ವಿರುದ್ಧ ಪ್ರತಿಭಟನೆ ನಡೆಸಿದವು.
[vc_row][vc_column]
BREAKING NEWS
- ಬೆಂಗಳೂರಿನ 7ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ
- ಗ್ರಾಹಕರಿಗೆ ಶಾಕ್ : ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ
- ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈಗೆ ತೆರೆಳಿದ ಮೋದಿ – ಅದ್ದೂರಿ ಸ್ವಾಗತ
- ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ: ಅಪಹರಣಕಾರರ ಬಂಧನ
- ಭ್ರೂಣ ಹತ್ಯೆ ಪ್ರಕರಣ- ಸಿಐಡಿ ತನಿಖೆಗೆ ಒಪ್ಪಿಸಿದ ಸಿಎಂ
- ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ
- ಏರ್ ಇಂಡಿಯಾ ವಿಮಾನದೊಳಗೆ ನೀರು ಸೋರಿಕೆ- ಪ್ರಯಾಣಿಕರ ಪರದಾಟ
- ದ್ವಿತೀಯ ಪಿಯುಸಿ ಪಾಸಾದವರು ಅರಣ್ಯ ಇಲಾಖೆಯ 540 ರಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು.!
- ರಾಜ್ಯದ ಮುಖ್ಯ ಕಾರ್ಯದರ್ಶಿ ಅಜನೀಶ್ ಗೋಯೆಲ್.!
- ಹಲವೆಡೆ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ: ಹವಾಮಾನ ಇಲಾಖೆ .!