ಬೆಂಗಳೂರು: ಯಾವುದೇ ಸಂಘಟನೆ ಸಮಾಜದಲ್ಲಿ ಶಾಂತಿ ಹಾಗೂ ಸಾಮರಸ್ಯ ಕದಡುವ ಕೆಲಸ ಮಾಡಿದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಂಗಳೂರು: ಲಕ್ಷ್ಮಣ ಸವದಿ, ಶೆಟ್ಟರ್‌ಗೆ ‘ಕೈ’ ಕೊಟ್ಟ ಕಾಂಗ್ರೆಸ್ ವರಿಷ್ಠರು.!
ಮಾಜಿ ಪ್ರಧಾನಿ ಜವಾಹರಲಾಲ್ ನೆಹರೂ ಅವರ 59 ನೇ ಪುಣ್ಯ ತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿರುವ ನೆಹರೂ ಪ್ರತಿಮೆಗೆ ಶನಿವಾರ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಸಂಘ ಪರಿವಾರ (ಆರ್‌ಎಸ್‌ಎಸ್) ನಿಷೇಧ ಮಾಡುವ ಬಗ್ಗೆ ಸರ್ಕಾರ ಹೇಳಿಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು. ಶನಿವಾರ ಅಥವಾ ಭಾನುವಾರ ಎಲ್ಲ ಸಚಿವರಿಗೂ ಖಾತೆ ಹಂಚಿಕೆ ಮಾಡಲಾಗುವುದು ಎಂದರು.