ಮುಂಬೈ: ಮಹಾರಾಷ್ಟ್ರದ ರಾಜಧಾನಿ ಮುಂಬೈನ ಚೆಂಬೂರ್ ಪ್ರದೇಶದಲ್ಲಿ ಎರಡು ಅಂತಸ್ತಿನ ಕಟ್ಟಡದಲ್ಲಿರುವ ಮನೆಯೊಂದರಲ್ಲಿ ಭಾನುವಾರ ಬೆಳಗ್ಗೆ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಏಳು ಮಂದಿ ಸಾವನ್ನಪ್ಪಿದ್ದಾರೆ. ಬೆಂಕಿ ಅವಘಡ ಸಂಭವಿಸಿದಾಗ ಸಂತ್ರಸ್ತರು ಮಲಗಿದ್ದರು ಎಂದು ವರದಿಗಳು ತಿಳಿಸಿದ್ದು, ಬೆಳಗಿನ ಜಾವ 5.30 ರ ಸುಮಾರಿಗೆ ಬೆಂಕಿ ಹೊತ್ತಿಕೊಂಡಿದ್ದು ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹೊತ್ತಿಕೊಂಡಿದೆ ಎಂದು ವರದಿಗಳು ತಿಳಿಸಿವೆ. ಘಟನೆ ಕುರಿತು ತನಿಖೆ ನಡೆಸಲಾಗುತ್ತಿದೆ.
