ಅಮರಾವತಿ : ಶಾಲೆಗಳಲ್ಲಿ ಮೊಬೈಲ್ ಫೋನ್ ಬಳಕೆಯನ್ನ ನಿಷೇಧಿಸಿ ಆಂಧ್ರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ವಿದ್ಯಾರ್ಥಿಗಳು ಶಾಲೆಗಳಿಗೆ ಮೊಬೈಲ್ ತರುವುದನ್ನ ನಿಷೇಧಿಸಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಅಲ್ಲದೇ ತರಗತಿಗಳಲ್ಲಿ ಶಿಕ್ಷಕರೂ ಸಹ ಮೊಬೈಲ್ ಫೋನ್ ಬಳಸುವುದನ್ನ ಶಿಕ್ಷಣ ಇಲಾಖೆ ನಿಷೇಧಿಸಿದೆ. ತರಗತಿಗಳಿಗೆ ಹೋಗುವ ಮುನ್ನ ಶಿಕ್ಷಕರು ತಮ್ಮ ಮೊಬೈಲ್‌ಗಳನ್ನು ಮುಖ್ಯ ಶಿಕ್ಷಕರ ಬಳಿ ಕೊಟ್ಟು ಹೋಗಬೇಕು ಎಂದು ಸೂಚಿಸಿದೆ. ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ (UNESCO) ಜಾಗತಿಕ ಶಿಕ್ಷಣ ಮೇಲ್ವಿಚಾರಣಾ ವರದಿಗೆ ಅನುಗುಣವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಜೊತೆಗೆ ಶಿಕ್ಷಕರಿಂದ ಮಕ್ಕಳಿಗೆ ಉಂಟಾಗುವ ತೊಂದರೆ ತಪ್ಪಿಸಲು ಶಿಕ್ಷಕರೂ ತರಗತಿಗಳಲ್ಲಿ ಮೊಬೈಲ್ ಬಳಸುವುದನ್ನ ನಿಷೇಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ವಿಶ್ವಸಂಸ್ಥೆಯು ಶಾಲೆಗಳಲ್ಲಿ ಫೋನ್ ಬಳಕೆಯನ್ನ ನಿಷೇಧಿಸಿದೆ. ಡೇಟಾ ಗೌಪ್ಯತೆ, ಸುರಕ್ಷತೆ ಮತ್ತು ಮಗುವಿನ ಯೋಗಕ್ಷೇಮ ಕಾಳಜಿಯಿಂದ ಜಾಗತಿಕವಾಗಿ ನಾಲ್ಕು ದೇಶಗಳಲ್ಲಿ ಈ ಕ್ರಮ ಅನುಷ್ಠಾನಕ್ಕೆ ಬಂದಿದೆ. ಇದನ್ನ ಮಾದರಿಯಾಗಿ ತೆಗೆದುಕೊಂಡಿರುವ ಶಿಕ್ಷಣ ಇಲಾಖೆ ಆಂಧ್ರ ಪ್ರದೇಶದ ಶಾಲೆಗಳಲ್ಲಿಯೂ ಮೊಬೈಲ್ ಬಳಕೆಗೆ ನಿಷೇಧ ಹೇರಿದೆ.
[vc_row][vc_column]
BREAKING NEWS
- ಕೇರಳದಲ್ಲಿ ನಿಫಾ ವೈರಸ್ ನಿಯಂತ್ರಣ – ನಿರ್ಬಂಧ ಸಡಿಲ
- ಕೆಎಸ್ಒಯು ಪ್ರಶ್ನೆಪತ್ರಿಕೆ ಲೀಕ್ – ಮಂಗಳೂರು ಕೇಂದ್ರದ ಸಿಬ್ಬಂದಿಯಿಂದ ಕೃತ್ಯ?
- ಉಗ್ರನಿಗೆ ಕಾನೂನಿನಿಂದ ತಪ್ಪಿಸಿಕೊಳ್ಳುವುದು ಹೇಗೆಂದು ಹೇಳಿಕೊಟ್ಟ ಜಮ್ಮು ಕಾಶ್ಮೀರದ ಡೆಪ್ಯುಟಿ ಎಸ್ಪಿ ಅರೆಸ್ಟ್
- ಕೆಲಸ ತೊರೆದ ಮಹಿಳೆ 8 ಸಾವಿರ ಕೋಟಿ ರೂ. ಮೌಲ್ಯದ ಕಂಪನಿಯ ಕಟ್ಟಿ ಬೆಳೆಸಿದರು
- ಸ್ಲೀಪ್ ಮೋಡ್ ನಿಂದ ಎಚ್ಚರವಾಗುತ್ತಾ ವಿಕ್ರಂ, ಪ್ರಗ್ಯಾನ್?
- ಭಾರತ ಕೊಟ್ಟ ಅಧ್ಯಕ್ಷೀಯ ಸೂಟ್ ನಿರಾಕರಿಸಿದ್ದ ಜಸ್ಟಿನ್ ಟ್ರುಡೋ
- ಟಿವಿ ವಾಹಿನಿಗಳಿಗೆ ಕೇಂದ್ರ ಸರ್ಕಾರದಿಂದ ಮಹತ್ವದ ನಿರ್ದೇಶನ
- ವಿಶ್ವ ಕುಸ್ತಿ ಚಾಂಪಿಯನ್ಶಿಪ್ನಲ್ಲಿ ಕಂಚಿನ ಪದಕ ಗೆದ್ದ 19 ವರ್ಷದ ಆಂಟಿಮ್ ಪಂಗಲ್
- ಚೈತ್ರಾ ಹೇಳಿದಂತೆ ಮಾಡಿದ್ದೀನಿ– ಸಿಸಿಬಿ ಮುಂದೆ ತಪ್ಪೊಪ್ಪಿಕೊಂಡ ಅಭಿನವ ಹಾಲಶ್ರೀ..!
- ಖಾಸಗಿ ಶಾಲೆಗಳಿಗೆ ಬಿಗ್ ರಿಲೀಫ್.! ಈ ಮಾನದಂಡಗಳು ಇಲ್ಲ.!