Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಶಿವಮೊಗ್ಗದ ಯುವಕ ನಾಲ್ಕನೇ ಅಂತಸ್ತಿನಿಂದ ಜಿಗಿದು ಯುವಕ ಆತ್ಮಹತ್ಯೆ.!

0

 

ಬೆಂಗಳೂರು : ಸ್ನೇಹಿತನ ಫೋನ್ ನಂಬರ್ ಬರೆದಿಟ್ಟು, ತಾನು ವಾಸವಿದ್ದ ಕಟ್ಟಡದ ನಾಲ್ಕನೇ ಅಂತಸ್ತಿನಿಂದ ಜಿಗಿದು ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆರ್ ಆರ್ ನಗರದ ಹಲಗೇವಡೆರಹಳ್ಳಿಯಲ್ಲಿ ನಡೆದಿದೆ.

ಶಿವಮೊಗ್ಗ ಮೂಲದ ಮದನ್ ಶೆಟ್ಟಿ (25) ಮೃತ ಯುವಕ. ಯುವಕ ಮದನ್ ಮಲ್ಲೇಶ್ವರಂ ಅರಣ್ಯ ಭವನ ಚಾಲಕನಾಗಿ ಕೆಲಸ ಮಾಡುತ್ತಿದ್ದನು. ಮದನ್​​ ನಾಲ್ಕು ಅಂತಸ್ತಿನ ಬಿಲ್ಡಿಂಗ್​ನಲ್ಲಿ ಬಾಡಿಗೆಗೆ ಇದ್ದನು. ಈತನ ಜೊತೆ ತೇಜು ಹಾಗೂ ಇನ್ನೊಬ್ಬ ಸ್ನೇಹಿತ ಬಾಡಿಗೆಗೆ ಇದ್ದರು. ಘಟನಾ ಸ್ಥಳಕ್ಕೆ ಆರ್ ಆರ್ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆರ್.ಆರ್.ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave A Reply

Your email address will not be published.