ಶಿವಮೊಗ್ಗ ಗಲಭೆ ಸರ್ಕಾರದ ಓಲೈಕೆ ರಾಜಕಾರಣದ ಫಲ: ಬಸವರಾಜ ಬೊಮ್ಮಾಯಿ

WhatsApp
Telegram
Facebook
Twitter
LinkedIn

ಬೆಂಗಳೂರು: ರಾಜ್ಯ ಸರ್ಕಾರ ಒಂದು ಸಮುದಾಯದ ಓಲೈಕೆ ರಾಜಕಾರಣ ಮಾಡುತ್ತಿರುವುದರಿಂದ ಶಿವಮೊಗ್ಗದ ಗಲಭೆಗೆ ಪ್ರೇರಣೆಯಾಗಿದ್ದು, ತಪ್ಪಿತಸ್ಥರು ಯಾರೆ ಇರಲಿ ಅವರನ್ನು ಹಿಡಿದು ಒಳೆಗೆ ಹಾಕುವ ಬದಲು ಸಚಿವರು ಅವರಿಗೆ ಕ್ಲೀನ್ ಚಿಟ್ ಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ.

ಈ ಕುರಿತು ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಗಲಭೆ ಮಾಡಿಸುತ್ತಿದ್ದಾರೆಂದು ಸಚಿವರೇ ದಾರಿ ತಪ್ಪಿಸುತ್ತಿದ್ದಾರೆ‌.‌ ಯಾರು ಕ್ರಮ ಕೈಗೊಳ್ಳಬೇಕೊ ಅವರೇ ಹೀಗೆ ಹೇಳಿದರೆ ಸರ್ಕಾರದ ಮೆಲೆ ಜನ ಭರವಸೆ ಇಡುವುದು ಹೇಗೆ ? ಗೃಹ ಸಚಿವರು ಇದು ಸಣ್ಣ ಘಟನೆ ಅಂತ ಹೇಳಿದ್ದಾರೆ . ಈ ಸರ್ಕಾರದ ತುಷ್ಟೀಕರಣದ ನೀತಿಯೇ ಸಮಾಜ ಘಾತುಕ ಶಕ್ತಿಗಳು ಹೆಚ್ಚಾಗಲು ಕಾರಣವಾಗಿದೆ. ಗಡಿ ಜಿಲ್ಲೆಗಳಲ್ಲಿ ಸಮಾಜ ಘಾತುಕ‌ಶಕ್ತಿಗಳು ಜಾಲ ವ್ಯಾಪಿಸಿಕೊಳ್ಳಲು ಕಾರಣವಾಗಿದೆ‌ ಎಂದಿದ್ದಾರೆ.

ಇಷ್ಟೇ ಅಲ್ಲದೇ ಈ ಥರದ ಕೇಸ್ ಗಳಲ್ಲಿ ಆರೆಸ್ಟ್ ಆದವರನ್ನು ಬಿಡುಗಡೆ ಮಾಡುವಂತೆ ಸಚಿವರು, ಶಾಸಕರು ಒತ್ತಾಯ ಮಾಡುವುದನ್ನು ನೋಡಿದರೆ ಈ ಸರ್ಕಾರ ಏನು ಮಾಡಲು ಹೊರಟಿದೆ ಅಂತ ತಿಳಿಯುತ್ತಿಲ್ಲ. ಹಿಂದೆ ಪಿಎಫ್ಬೈ ನಲ್ಲಿ ಇದ್ದವರೆ ಹುಬ್ಬಳ್ಳಿ ಗಲಭೆಯಲ್ಲಿ ಇದ್ದರು. ಡಿಸಿಎಂ ಶಿವಕುಮಾರ್ ಅವರೇ ಹುಬ್ಬಳ್ಳಿ ಗಲಭೆಯಲ್ಲಿ ಪಾಲ್ಗೊಂಡವರ ಪ್ರಕರಣ ವಾಪಸ್ ಪಡೆಯಲು ಪತ್ರ ಬರೆದಿದ್ದಾರೆ ಎಂದರೆ ಏನರ್ಥ.

ಗೃಹ ಸಚಿವರು ಶಿವಮೊಗ್ಗ ಘಟನೆ ಸಣ್ಣ ಘಟನೆ ಅಂತ ಗೃಹ ಸಚಿವರು ಹೇಳಿದ್ದಾರೆ. ಈಗ ತಪ್ಪಿನ ಅರಿವಾಗಿ ತಾವು ಹೇಳಿಲ್ಲ ಅಂತ ತಿರುಗಿಸುತ್ತಿದ್ದಾರೆ. ಉಡುಪಿಯಲ್ಲಿ ಹಿಂದೂ ಸಂಘಟನೆಗಳು ಕಾರ್ಯಕ್ರಮಕ್ಕೆ ಹಾಕಿರುವ ಬ್ಯಾನರ್ ಗಳನ್ನು ತೆರವುಗೊಳಿಸುವುದು ಓಲೈಕೆ ರಾಜಕಾರಧ ಸ್ಪಷ್ಟ ಉದಾಹರಣೆ ಎಂದು ಹೇಳಿದ್ದಾರೆ.

BC Suddi   About Us
BC Suddi Bcsuddi is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World. Read More
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon