ಚಿಕ್ಕಬಳಾಪುರ: ಸಂಸದ ಡಾ.ಕೆ.ಸುಧಾಕರ್‌ಗೆ ಕೇಂದ್ರ ಹಣಕಾಸು ಸಂಸದೀಯ ಸ್ಥಾಯಿ ಸಮಿತಿಯ ಸದಸ್ಯರನ್ನಾಗಿ ನೇಮಿಸಲಾಗಿದೆ. ಮೊದಲ ಬಾರಿ ಸಂಸದರಾಗಿ ಆಯ್ಕೆಯಾದ ಡಾ. ಸುಧಾಕರ್‌ಗೆ ಮಹತ್ವದ ಹುದ್ದೆ ನೀಡಲಾಗಿದೆ. ಇದಕ್ಕೆ ಸಂಸದ ಡಾ.ಕೆ.ಸುಧಾಕರ್ ಸಂತಸ ವ್ಯಕ್ತಪಡಿಸಿದ್ದಾರೆ. ‘ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ಆಯ್ಕೆಯಾಗಿರುವುದು ಅತ್ಯಂತ ಹೆಮ್ಮೆ ಮತ್ತು ಸಂತಸದ ವಿಷಯ ಎಂದು ಅವರು ಹೇಳಿದ್ದಾರೆ. ‘2025 ರ ವೇಳೆಗೆ ಭಾರತವನ್ನು 5 ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿಸುವ ಪ್ರಧಾನಿ ನರೇಂದ್ರ ಮೋದಿಯ ಮಹತ್ವಕಾಂಕ್ಷೆಯ ಗುರಿಯನ್ನು ಸಾಧಿಸುವ ನಿಟ್ಟಿನಲ್ಲಿ, ಸಂಸತ್ತಿನ ಹಣಕಾಸು ಸ್ಥಾಯಿ ಸಮಿತಿಯ ಸದಸ್ಯನಾಗಿ ನನ್ನದೇ ಆದ ಅಳಿಲು ಸೇವೆ ಸಲ್ಲಿಸಲು ಉತ್ಸುಕನಾಗಿದ್ದೇನೆ’ ಎಂದು ಅವರು ತಿಳಿಸಿದ್ದಾರೆ.