ಜಗತ್ತು ಡಿಜಿಟಲೀಕರಣಗೊಳ್ಳುತ್ತಿರುವಾಗ ನೀವು ಮಾತ್ರ ಆನ್ಲೈನ್ ಪೇಮೆಂಟ್ ಏಕೆ ಸ್ವೀಕರಿಸುತ್ತಿಲ್ಲ ಎಂದು ಬೆಸ್ಕಾಂ ಅನ್ನು ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ಆ ಬಗ್ಗೆ ಪ್ರಮಾಣಪತ್ರ ಸಲ್ಲಿಸುವಂತೆ ವ್ಯವಸ್ಥಾಪಕ ನಿರ್ದೇಶಕರಿಗೆ ನಿರ್ದೇಶನ ನೀಡಿದೆ.
ವಿದ್ಯುತ್ ಸರಬರಾಜು ಕೋರಿ ಸಲ್ಲಿಸಿದ್ದ ಅರ್ಜಿ ತಿರಸ್ಕರಿಸಿ ಹಾಗೂ ಪ್ರಿಷೇಯ್ದ್ ಮೀಟರ್ ಕೊಡಲು ನಿರಾಕರಿಸಿದ್ದ ಬೆಸ್ಕಾಂ ಹೊಸಕೋಟೆ ವೃತ್ತದ ಎಂಜಿನಿಯರ್ ಆದೇಶ ರದ್ದು ಕೋರಿ ಸೀತಾಲಕ್ಷ್ಮಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಲ್ಲಿ ಆದೇಶ ನೀಡಿದೆ.