ಸತತ ಮಳೆಯಿಂದಾಗಿ ಬೆಂ.ನಗರ ಜಿಲ್ಲೆಯಾದ್ಯಂತ ನಾಳೆ ಶಾಲೆಗಳಿಗೆ ರಜೆ : ಡಿಸಿ ಜಗದೀಶ್

ಬೆಂಗಳೂರು : ಬೆಂಗಳೂರು ನಗರ ಜಿಲ್ಲೆಯಾದ್ಯಂತ ನಿರಂತರವಾಗಿ ಮಳೆಯಾಗುತ್ತಿದ್ದು, ನಾಳೆ ಅ. ೨೩ ರಂದು ಮುಂಜಾಗೃತ ಕ್ರಮವಾಗಿ ಹಾಗೂ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬೆಂಗಳೂರು ನಗರ ಜಿಲ್ಲೆಯ ಎಲ್ಲಾ ತಾಲೂಕಿನ ಅಂಗನವಾಡಿ ಕೇಂದ್ರಗಳಿಗೆ ಹಾಗೂ ಖಾಸಗೀ / ಅನುದಾನಿತ ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆಯನ್ನು ಘೋಷಿಸಿ ಬೆಂಗಳೂರು ನಗರ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಗದೀಶ ಜಿ ರವರು ಆದೇಶಿಸಿದ್ದಾರೆ.

ಉಳಿದಂತೆ ಎಲ್ಲಾ ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೋಮ, ಇಂಜಿನಿಯರಿಂಗ್ , ಐ.ಟಿ.ಐ ಗಳಿಗೆ ರಜೆ ಘೋಷಿಸಿರುವುದಿಲ್ಲ.ಕಾಲೇಜುಗಳಲ್ಲಿ ಪಾಠ ಪ್ರವಚನಗಳನ್ನು ನಡೆಸುವಾಗ ಕೆಲವೊಂದು ಅಂಶಗಳನ್ನು ಪರಿಗಣಿಸುವಂತೆ ಕಾಲೇಜುಗಳ ಮುಖ್ಯಸ್ಥರಿಗೆ ಹಾಗೂ ಸಂಬಂಧ ಪಟ್ಟವರಿಗೆ ಸಾಮಾನ್ಯ ಸೂಚನೆಯನ್ನು ನೀಡಲಾಗಿದ್ದು, ಕಾಲೇಜು ಮುಖ್ಯಸ್ಥರು ವಿದ್ಯಾರ್ಥಿಗಳು ಕಾಲೇಜಿಗೆ ಆಗಮಿಸುವಾಗ ಹಾಗೂ ಮನೆಗೆ ತೆರಳುವ ಸಂದರ್ಭದಲ್ಲಿ ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ತಲುಪುವ ಬಗ್ಗೆ ಗಮನವಹಿಸುವುದು.

ದುರ್ಬಲ / ಶಿಥಿಲ ಕಟ್ಟಡಗಳು ಇದ್ದಲ್ಲಿ ಅಂತಹ ಕಟ್ಟಡಗಳನ್ನು ಪಾಠ ಪ್ರವಚನಗಳಿಗೆ ಬಳಸುವಂತಿಲ್ಲ. ಈ ನಿಟ್ಟಿನಲ್ಲಿ ಕಾಲೇಜುಗಳ ಮುಖ್ಯಸ್ಥರು ಕಾಲೇಜು ಕಟ್ಟಡಗಳ ಸುಸ್ಥಿತಿಯ ಬಗ್ಗೆ ಗಮನಹರಿಸುವುದು ಹಾಗೂ ಯಾವುದೇ ಅವಘಡಗಳು ಉಂಟಾಗದಂತೆ ಸೂಕ್ತ ಕ್ರಮವಹಿಸುವುದು.

Advertisement

ಮುಂಜಾಗೃತಾ ಕ್ರಮವಾಗಿ ರಜೆಯನ್ನು ನೀಡಿ ಉಂಟಾಗಿರುವ ಕಲಿಕಾ ಸಮಯ ಕೊರತೆಯನ್ನು ಶನಿವಾರ ಮಧ್ಯಾಹ್ನ ಅಥವಾ ಭಾನುವಾರಗಳಂದು ಹೆಚ್ಚುವರಿ ತರಗತಿಗಳನ್ನು ನಡೆಸಿ ನಷ್ಟವನ್ನು ಸರಿದೂಗಿಸುವಂತೆ ತಿಳಿಸಿದೆ.

ವಿದ್ಯಾರ್ಥಿಗಳ ಪೋಷಕರು/ಕಾಲೇಜು ಮುಖ್ಯಸ್ಥರು, ವಿದ್ಯಾರ್ಥಿಗಳು ನೀರು ಇರುವ ತಗ್ಗು ಪ್ರದೇಶಗಳಿಗೆ ಹೋಗದಂತೆ ಜಾಗ್ರತೆ ವಹಿಸುವುದು. ವಿದ್ಯಾರ್ಥಿಗಳು ಕಾಲೇಜುಗಳಿಗೆ ಹೋಗುವ ವಾಹನಗಳ ಸುರಕ್ಷತೆಯನ್ನು ನೋಡಿಕೊಳ್ಳುವುದು. ಕಾಲೇಜುಗಳಲ್ಲಿ ಪ್ರಾಕೃತಿಕ ವಿಕೋಪ ನಿಭಾಯಿಸುವ ಬಗ್ಗೆ, ವಿದ್ಯಾರ್ಥಿಗಳಿಗೆ ಮಾಹಿತಿಯನ್ನು ನೀಡಬೇಕೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement