ಬೆಂಗಳೂರು: ಸರ್ಕಾರಿ ಕಚೇರಿಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಂಗೊಳ್ಳಿ ರಾಯಣ್ಣ ಫೋಟೋವನ್ನು ಕಡ್ಡಾಯ ಮಾಡುವ ಬಗ್ಗೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮಂಗಳವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಾನ ಮತ್ತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ನಡೆದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನವರ 226ನೇ ಜಯಂತೋತ್ಸವದಲ್ಲಿ ರಾಯಣ್ಣ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದರು. ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣನ ಹೆಸರಿಡಲು ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಇದೇ ವೇಳೆ ಸಿಎಂ ಸಿದ್ದರಾಮಯ್ಯ ಹೇಳಿದರು. ಬೆಂಗಳೂರು ರೈಲ್ವೆ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ ಹೆಸರಿಡಲು ಕೃಷ್ಣಮೂರ್ತಿ ಕಾರಣವಾಗಿದ್ದಾರೆ. ಜೊತೆಗೆ, ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆಗೂ ಕೃಷ್ಣಮೂರ್ತಿ ಕಾರಣ ಅಂತ ತಿಳಿಸಿದರು. ಸ್ವಾತಂತ್ರ್ಯವೀರ ಸಂಗೊಳ್ಳಿರಾಯಣ್ಣನನ್ನು ಬ್ರಿಟಿಷರಿಗೆ ಹಿಡಿದುಕೊಟ್ಟವರು ನಮ್ಮವರೇ. ಈಗಲೂ ಬ್ರಿಟಿಷರ ಏಜೆಂಟರುಗಳು ಇದ್ದಾರೆ. ಅವರು ನಮ್ಮ ನಿಜವಾದ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸುತ್ತಾರೆ. ಇಂಥವರ ಬಗ್ಗೆ ಎಚ್ಚರದಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
[vc_row][vc_column]
BREAKING NEWS
- ಬೆಂಗಳೂರಿನ 7ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ
- ಗ್ರಾಹಕರಿಗೆ ಶಾಕ್ : ಎಲ್ಪಿಜಿ ಸಿಲಿಂಡರ್ ಬೆಲೆಯಲ್ಲಿ ಏರಿಕೆ
- ವಿಶ್ವ ಹವಾಮಾನ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ದುಬೈಗೆ ತೆರೆಳಿದ ಮೋದಿ – ಅದ್ದೂರಿ ಸ್ವಾಗತ
- ಶಾಲಾ ಶಿಕ್ಷಕಿ ಕಿಡ್ನಾಪ್ ಪ್ರಕರಣ ಸುಖಾಂತ್ಯ: ಅಪಹರಣಕಾರರ ಬಂಧನ
- ಭ್ರೂಣ ಹತ್ಯೆ ಪ್ರಕರಣ- ಸಿಐಡಿ ತನಿಖೆಗೆ ಒಪ್ಪಿಸಿದ ಸಿಎಂ
- ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ರಜನೀಶ್ ಗೋಯಲ್ ನೇಮಕ
- ಏರ್ ಇಂಡಿಯಾ ವಿಮಾನದೊಳಗೆ ನೀರು ಸೋರಿಕೆ- ಪ್ರಯಾಣಿಕರ ಪರದಾಟ
- ದ್ವಿತೀಯ ಪಿಯುಸಿ ಪಾಸಾದವರು ಅರಣ್ಯ ಇಲಾಖೆಯ 540 ರಕ್ಷಕರ ಹುದ್ದೆಗೆ ಅರ್ಜಿ ಸಲ್ಲಿಸಬಹುದು.!
- ರಾಜ್ಯದ ಮುಖ್ಯ ಕಾರ್ಯದರ್ಶಿ ಅಜನೀಶ್ ಗೋಯೆಲ್.!
- ಹಲವೆಡೆ ಡಿಸೆಂಬರ್ 5ರವರೆಗೆ ಮಳೆಯಾಗಲಿದೆ: ಹವಾಮಾನ ಇಲಾಖೆ .!