ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ವಿಜಯ ರಾಘವೇಂದ್ರ “ಜೋಗ್ 101” ಚಿತ್ರದಲ್ಲಿ ನಾಯಕರಾಗಿ ನಟಿಸಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆಯಾಗಿದೆ. ಚಿತ್ರದ ಫಸ್ಟ್ ಲುಕ್ ಕುತೂಹಲ ಮೂಡಿಸಿದ್ದು, ಚಿತ್ರ ನೋಡುವ ಕಾತುರವನ್ನು ಹೆಚ್ಚಿಸಿದೆ. ಸೆವೆನ್ ಸ್ಟಾರ್ ಪಿಕ್ಚರ್ಸ್ ಲಾಂಛನದಲ್ಲಿ ರಘು(ರಾಘವೇಂದ್ರ ) ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಕ್ರಿಯೇಟಿವ್ ಡೈರೆಕ್ಟರ್ ಆಗಿಯೂ ಕಾರ್ಯ ನಿರ್ವಹಿಸಿದ್ದಾರೆ. ವಿಜಯ್ ಕನ್ನಡಿಗ ಈ ಚಿತ್ರದ ನಿರ್ದೇಶಕರು. ಸದ್ದಿಲ್ಲದೆ ಚಿತ್ರೀಕರಣ ಮುಗಿಸಿರುವ “ಜೋಗ್ 101” ಚಿತ್ರ ಈಗಾಗಲೇ ಬಿಡುಗಡೆಯ ಸನಿಹದಲ್ಲಿದೆ. ಪ್ರಚಾರ ಕಾರ್ಯ ಆರಂಭಿಸಿರುವ ಚಿತ್ರತಂಡ ಮೊದಲ ಹೆಜ್ಜೆಯಾಗಿ ಫಸ್ಟ್ ಲುಕ್ ಬಿಡುಗಡೆ ಮಾಡಿದೆ. ಮುಂದೆ ಟೀಸರ್, ಹಾಡುಗಳು ಹಾಗೂ ಟ್ರೇಲರ್ ಸಹ ಬರಲಿದೆ. ಅವಿನಾಶ್ ಆರ್ ಬಾಸೂತ್ಕರ್ ಅವರ ಸಂಗೀತ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಡಾ||ವಿ.ನಾಗೇಂದ್ರಪ್ರಸಾದ್, ಜಯಂತ್ ಕಾಯ್ಕಿಣಿ ಹಾಗೂ ಮನ್ವರ್ಷಿ ನವಲಗುಂದ ಬರೆದಿದ್ದಾರೆ. ರಘು ದೀಕ್ಷಿತ್ ಮತ್ತು ಸಂಚಿತ್ ಹೆಗಡೆ ಹಾಡಿದ್ದಾರೆ. ಸುನೀತ್ ಹಲಗೇರಿ ಛಾಯಾಗ್ರಹಣ, ಮೋಹನ್ ರಂಗಕಹಳೆ ಸಂಕಲನ, ಥ್ರಿಲ್ಲರ್ ಮಂಜು ಸಾಹಸ ನಿರ್ದೇಶನ ಹಾಗೂ ಕಲೈ ಮಾಸ್ಟರ್ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. ವಿಜಯ ರಾಘವೇಂದ್ರ ಅವರಿಗೆ ನಾಯಕಿಯಾಗಿ ತೇಜಸ್ವಿನಿ ಶೇಖರ್ ನಟಿಸಿದ್ದಾರೆ. ಗೋವಿಂದೇ ಗೌಡ, ಕಡಿಪುಡಿ ಚಂದ್ರು, ರಾಜೇಶ್ ನಟರಂಗ, ತಿಲಕ್, ನಿರಂಜನ್ ದೇಶಪಾಂಡೆ, ಶಶಿಧರ್, ಪ್ರಸನ್ನ, ಸುಂದರಶ್ರೀ, ಹರ್ಷಿತಾ ಗೌಡ “ಜೋಗ್ 101” ಚಿತ್ರದ ತಾರಾಬಳಗದಲ್ಲಿದ್ದಾರೆ.
[vc_row][vc_column]
BREAKING NEWS
- ವೀರಶೈವ ಲಿಂಗಾಯತರು ಸ್ವಯಂ ಉದ್ಯೋಗ, ಶೈಕ್ಷಣಿಕ, ಕಾರು ಖರೀದಿ ಸಾಲಕ್ಕೆ ಅರ್ಜಿ ಆಹ್ವಾನ.!
- ಕರ್ನಾಟಕ ಡಿ.ಎಸ್.ಟಿ. ಪಿ.ಹೆಚ್.ಡಿ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ
- ಉದ್ಯಮಶೀಲತಾ ಅಭಿವೃದ್ದಿ ತರಬೇತಿ ಕಾರ್ಯಕ್ರಮ.!
- ಚಿತ್ರದುರ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ರಾಷ್ಟ್ರಮಟ್ಟದಲ್ಲಿ 2ನೇ ಬಹುಮಾನ- ಡಿ. ಸುಧಾಕರ್
- ಮಾರಕ ಕಾಯಿಲೆ ಡೆಂಗ್ಯೂ ಬಗ್ಗೆ ಈ ಲಕ್ಷಣಗಳು ಕಂಡುಬಂದರೆ.?
- ಈ ಕಾರಣಕ್ಕೆ ಈ ಪರ್ವತ ಚಾರಣಕ್ಕೆ ನಿಷೇಧ.. !
- ಇಂದು ಮತ್ತೊಮ್ಮೆ ಎಮರ್ಜೆನ್ಸಿ ಅಲರ್ಟ್.. ! ಏನದು.?
- ಪುಷ್ಪಗಳಿಂದ ಶತ್ರುನಾಶ ತಂತ್ರ ಈ ಒಂದೇ ಒಂದು ಪುಷ್ಪದಿಂದ ಎಂತಹ ಶತ್ರು ಇದ್ದರೂ ಕೂಡ ನಾಶ ಮಾಡಿ ನಿಮ್ಮಂತೆ ಶರಣಾಗತಿಯಾಗುವತರ ಮಾಡಬಹುದು!
- — –ದಾಸೋಹದ ಸಂಗಣ್ಣ ಅವರ ವಚನ .!
- ನೇಪಾಳದಲ್ಲಿ ಭೂಕಂಪನ: ದೆಹಲಿ, ಎನ್ ಸಿಆರ್ ನಲ್ಲೂ ಕಂಪಿಸಿದ ಭೂಮಿ