ಚಿತ್ರದುರ್ಗ: ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದೆ. ಆಗಸ್ಟ್ 20 ಅರ್ಜಿ ಸಲ್ಲಿಸಲು ಕೊನೆಯ ದಿನ.
ಅಭಿಯೋಗ ಮತ್ತು ಸರ್ಕಾರಿ ವ್ಯಾಜ್ಯಗಳ ಇಲಾಖೆ, ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 07 ಸಹಾಯಕ ಸರ್ಕಾರಿ ಅಭಿಯೋಜಕರು-ವ-ಸಹಾಯಕ ಸರ್ಕಾರಿ ವಕೀಲರ ಹುದ್ದೆಗಳು ಖಾಲಿ ಇದ್ದು, ಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕವಾಗಿ ಭರ್ತಿ ಮಾಡುವುದಕ್ಕೆ ಸರ್ಕಾರ ಆದೇಶಿಸಿದ್ದು, ಸಹಾಯಕ ಸರ್ಕಾರಿ ಅಭಿಯೋಜಕರ ನೇಮಕಾತಿ ನಿಯಮಗಳು 2012ರಲ್ಲಿ ನಿಗದಿಪಡಿಸಲಾಗಿರುವ ಕನಿಷ್ಠ ಮತ್ತು ಗರಿಷ್ಠ ವಯೋಮಿತಿಯ ಅನುಸಾರ ಅರ್ಹವಿರುವ ವಕೀಲರುಗಳು (ಅಭ್ಯರ್ಥಿಗಳು) ಅರ್ಜಿಯನ್ನು ಇದೇ ಆಗಸ್ಟ್ 20 ರೊಳಗಾಗಿ ಸರ್ಕಾರಿ ಅಭಿಯೋಜಕರ ಕಚೇರಿ, ಜಿಲ್ಲಾ ನ್ಯಾಯಾಲಯ ಸಂಕೀರ್ಣ, ಚಿತ್ರದುರ್ಗ ಈ ವಿಳಾಸಕ್ಕೆ ಸಲ್ಲಿಸಬೇಕು ಎಂದು ಜಿಲ್ಲಾ ಅಭಿಯೋಜಕರು ಹಾಗೂ ಜಿಲ್ಲಾಮಟ್ಟದ ಆಯ್ಕೆ ಸಮಿತಿ ಸದಸ್ಯ ಕಾರ್ಯದರ್ಶಿ ಬಿ.ಗಣೇಶ ನಾಯ್ಕ ತಿಳಿಸಿದ್ದಾರೆ.