ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಭಾಸ್ಕರ್ ಪ್ರಸಾದ್‌ಗೆ ಬ್ಲಾಕ್ ಮೇಲ್ ಮಾಡಿ ಹಣಕ್ಕೆ ಡಿಮ್ಯಾಂಡ್ ಮಾಡಿದ್ದ ಆರೋಪ ಕೇಳಿ ಬಂದಿದೆ. ಈ ಸಂಬಂಧ ಕಾಂಗ್ರೆಸ್ ಕಾರ್ಯಕರ್ತೆ ಸಂಧ್ಯಾ, ಪವಿತ್ರಾ ನಾಗರಾಜ್ ವಿರುದ್ದ ಎಫ್ಐಆರ್ ದಾಖಲಾಗಿದೆ. ಈಕೆಯ ಜೊತೆ ಮತ್ತೊಬ್ಬ ಆರೋಪಿ ಪವಿತ್ರಾ ಎಂಬಾಕೆಯ ವಿರುದ್ಧವೂ ಭಾಸ್ಕರ್ ಪ್ರಸಾದ್ ದೂರು ನೀಡಿದ್ದು, ಬೆದರಿಕೆ ಹಾಕಿ 10 ಲಕ್ಷ ಹಣಕ್ಕೆ ಡಿಮ್ಯಾಂಡ್ ಮಾಡಿದ್ದಾಗಿ ಆರೋಪಿಸಿದ್ದಾರೆ. ಚಳುವಳಿ ಹಾಗೂ ಹೋರಾಟಗಳಲ್ಲಿ ಭಾಸ್ಕರ್‌ಗೆ 2 ವರ್ಷಗಳ ಹಿಂದೆ ಪವಿತ್ರಾ ಪರಿಚಯವಾಗಿತ್ತಂತೆ. ಕಳೆದ ಆಗಸ್ಟ್ 8 ರಂದು ವಾಟ್ಸ್‌ಆ್ಯಪ್‌ನಲ್ಲಿ ಲೈಂಗಿಕ ಸಂಪರ್ಕಕ್ಕೆ ಆಹ್ವಾನಿಸಿ ಅದರ ಫೋಟೋ ವಿಡಿಯೋಗಳನ್ನು ರೆಕಾರ್ಡ್ ಮಾಡಿಕೊಂಡು 10 ಲಕ್ಷ ಹಣ ನೀಡದಿದ್ದರೆ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದಾಗಿ ಪವಿತ್ರಾ ಬೆದರಿಕೆ ಹಾಕಿದ್ದಾಳೆ ಎಂದು ದೂರಲಾಗಿದೆ. ಹೀಗಾಗಿ ನೊಂದ ಭಾಸ್ಕರ್ ಪ್ರಸಾದ್ ಶಿವಾಜಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಎಫ್ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆಗೆ ಮುಂದಾಗಿದ್ದಾರೆ.