ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಝಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಅವರು ಜಾರಿ ನಿರ್ದೇಶನಾಲಯ (ಇ.ಡಿ.)ದ ವಿಚಾರಣೆಗೆ ಗೈರಾಗಿ ನಾಪತ್ತೆಯಾಗಿದ್ದು, ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಾಂಡಿ ಅವರು ಸೊರೆನ್ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನ ಘೋಷಿಸಲಾಗುವುದು ಎಂದು ವ್ಯಂಗ್ಯವಾಡಿದ್ದಾರೆ.
ಇ.ಡಿ. ಅಧಿಕಾರಿಗಳು ನವದೆಹಲಿಯಲ್ಲಿರುವ ಹೇಮಂತ್ ಸೊರೇನ್ ಅವರ ನಿವಾಸದಲ್ಲಿ ಸೋಮವಾರ ತಡರಾತ್ರಿಯ ವರೆಗೆ ಶೋಧ ನಡೆಸಿ ಅವರಿಗೆ ಸಂಬಂಧಿಸಿದ ಎರಡು ಕಾರುಗಳು ಸೇರಿದಂತೆ 36ಲಕ್ಷ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಬಿಜೆಪಿ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಮರಾಂಡಿ, ಹೇಮಂತ್ ಸೊರೇನ್ ಕಾಣೆಯಾಗಿದ್ದಾರೆ ಎಂದು ಪೋಸ್ಟರ್ ಪೋಸ್ಟ್ ಮಾಡಿದ್ದು ಸೊರೇನ್ ಮಾಹಿತಿ ನೀಡಿದವರಿಗೆ ನಗದು ಬಹುಮಾನ ಗೆಲ್ಲುವ ಅವಕಾಶ ಇದೆ ಎಂದು ಹೇಳಿಕೊಂಡಿದ್ದಾರೆ.


































