ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ಐದು ಜಿಲ್ಲೆಗಳಲ್ಲಿ ಗುರುವಾರ ಸಾಧಾರಣ ಮಳೆಯಾಗಿದ್ದು, ಸಿಡಿಲು ಬಡಿದು ಸುಮಾರು 14 ಜನರು ಸಾವನ್ನಪ್ಪಿರುವ ಘಟನೆ ವರದಿ ಆಗಿದೆ.
ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ನಾಲ್ವರು ಮತ್ತು ಮುರ್ಷಿದಾಬಾದ್ ಮತ್ತು ಉತ್ತರ 24 ಪರಗಣಗಳಲ್ಲಿ ತಲಾ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಪಶ್ಚಿಮ ಬಂಗಾಳದ ಪೊಲೀಸ್ ಅಧಿಕಾರಿಗಳು ಪಶ್ಚಿಮ ಮಿಡ್ನಾಪುರ ಮತ್ತು ಹೌರಾ ಗ್ರಾಮಾಂತರ ಜಿಲ್ಲೆಗಳಲ್ಲಿ ಇನ್ನೂ ಆರು ಸಾವುಗಳು ವರದಿಯಾಗಿವೆ.
ಪಶ್ಚಿಮ್ ಮಿಡ್ನಾಪುರ ಮತ್ತು ಹೌರಾ ಗ್ರಾಮಾಂತರದಲ್ಲಿ ತಲಾ ಮೂರು ಸಾವುಗಳು ವರದಿಯಾಗಿವೆ” ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.