ಬೆಂಗಳೂರು: ಸಿದ್ದರಾಮಯ್ಯ ಸಂಪುಟದಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್‌ಗೂ ಸ್ಥಾನ ಸಿಗುವ ಸಾಧ್ಯತೆಯಿದೆ ಎಂಬ ಸುದ್ದಿ ಹರಿದಾಡುತ್ತಿದೆ.
ಅವರು ವಿಧಾನ ಸಭಾಚುನಾವಣೆಯಲ್ಲಿ ಪರಭಾವಗೊಂಡಿದ್ದರೂ, ಕಾಂಗ್ರೆಸ್‌ಗೆ ಬಹುಮತ ಬರಲು ಲಿಂಗಾಯತ ಮತಗಳು ಕಾರಣವಾಗಿವೆ. !
ಶೆಟ್ಟರ್ ಲಿಂಗಾಯತ ಸಮುದಾಯದ ದೊಡ್ಡ ನಾಯಕ ಆಗಿರುವುದರಿಂದ, ಸಚಿವ ಸ್ಥಾನ ನೀಡಲು ಹೈಕಮಾಂಡ್ ಮುಂದಾಗಿದೆ ಎಂದು ವರದಿಯಾಗಿದೆ.
ಇಂದು ಸಿದ್ದರಾಮಯ್ಯ ಅವರನ್ನು ಭೇಟಿಯಾಗಿರುವ ಶೆಟ್ಟರ್, ಯಾವುದೇ ಸ್ಥಾನಮಾನದ ಆಕಾಂಕ್ಷಿ ಅಲ್ಲ. ಹೈಕಮಾಂಡ್ ಯಾವುದೇ ಜವಾಬ್ದಾರಿ ನೀಡಿದರೂ ನಿಭಾಯಿಸುತ್ತೇನೆ ಎಂದು ಅವರು ಹೇಳಿದ್ದಾರೆ.