ಇಂದು (ಜೂನ್ 21) ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನುಆಚರಿಸಲಾಗುತ್ತಿದೆ. ಕನ್ನಡ ಚಿತ್ರರಂಗ, ಹಿಂದಿ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈ ದಿನದಲ್ಲಿ ಭಾಗಿ ಆಗಿದ್ದಾರೆ. ಬಾಲಿವುಡ್ನ ಹಲವು ನಟಿಯರು ಯೋಗಕ್ಕೆ ಆದ್ಯತೆ ನೀಡುತ್ತಾರೆ. ಕೆಲವು ನಟಿಯರ ಬದುಕನ್ನು ಯೋಗ ಬದಲಾಯಿಸಿದೆ. ಈ ಬಗ್ಗೆ ಅವರು ಅನೇಕ ಸಂದರ್ಶನಗಳಲ್ಲಿ ಹೇಳಿಕೊಂಡಿದ್ದಿದೆ. ಈ ಸಾಲಿನಲ್ಲಿ ಕರೀನಾ ಕಪೂರ್, ಶಿಲ್ಪಾ ಶೆಟ್ಟಿ ಮೊದಲಾದವರು ಇದ್ದಾರೆ. ಕರೀನಾ ಕಪೂರ್ ಅವರು ಕುಟುಂಬದ ಆರೈಕೆಯಲ್ಲಿ ಬ್ಯುಸಿ ಇದ್ದಾರೆ. ಅವರು ಎರಡು ಮಕ್ಕಳ ತಾಯಿ. ಆದಾಗ್ಯೂ ಫಿಟ್ನೆಸ್ ಕಾಯ್ದುಕೊಂಡಿದ್ದಾರೆ. ಕರೀನಾ ಯೋಗ ಮಾಡುವುದಕ್ಕೆ ಹೆಚ್ಚು ಆದ್ಯತೆ ನೀಡುತ್ತಾರೆ. ಬಾಲಿವುಡ್ ನಟಿ ಮಲೈಕಾ ಅರೋರಾಗೆ ಈಗ ವಯಸ್ಸು 49. ಆದಾಗ್ಯೂ ಯುವತಿಯರನ್ನು ನಾಚಿಸುವಂತಿದೆ ಅವರ ಫಿಟ್ನೆಸ್. ಅವರು ಇಷ್ಟು ಫಿಟ್ ಆಗಿರೋಕೆ ಯೋಗವೂ ಕಾರಣ. ಅವರು ನಿತ್ಯ ಯೋಗಾಸನ ಮಾಡುತ್ತಾರೆ. ಸೈಫ್ ಅಲಿ ಖಾನ್ ಮಗಳು ಸಾರಾ ಅಲಿ ಖಾನ್ ಚಿತ್ರರಂಗಕ್ಕೆ ಬರುವುದಕ್ಕೂ ಮೊದಲೂ ದಪ್ಪ ಇದ್ದರು. ಇದಕ್ಕೆ ಅವರು ಸಾಕಷ್ಟು ಟ್ರೋಲ್ ಆಗಿದ್ದರು. ಜಿಮ್ ಜೊತೆ ನಿತ್ಯ ಯೋಗಾಸನ ಮಾಡುವುದನ್ನು ಅಭ್ಯಾಸ ಮಾಡಿಕೊಂಡ ನಂತರ ಅವರ ಬಾಡಿ ಫಿಟ್ ಆಯಿತು. ಈಗ ಫಿಟ್ ಆ್ಯಂಡ್ ಫೈನ್ ಆಗಿದ್ದಾರೆ. ಕನ್ನಡ ಸಿನಿಮಾದಿಂದ ಬಣ್ಣದ ಬದುಕು ಆರಂಭಿಸಿದ ನಟಿ ರಕುಲ್ ಪ್ರೀತ್ ಸಿಂಗ್ ಯೋಗಾಸನ ಮಾಡುತ್ತಾರೆ.ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಯೋಗಾಸನಕ್ಕೆ ಆದ್ಯತೆ ನೀಡುತ್ತಾರೆ. ಒಂದು ದಿನವೂ ಬಿಡದೇ ಯೋಗ ಮಾಡುತ್ತಾರೆ. ಸೋಶಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೂ ಯೋಗ ಹೇಳಿಕೊಡುತ್ತಾರೆ. ನಟಿ ದಿಯಾ ಮಿರ್ಜಾ ಅವರು ಕೂಡ ಯೋಗಾಸನ ಅಭ್ಯಾಸ ಮಾಡುತ್ತಾರೆ.
[vc_row][vc_column]
BREAKING NEWS
- ‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಲೆಕ್ಕಾಚಾರದ ತಂತ್ರಗಳು ಕೆಲಸ ಮಾಡುವುದಿಲ್ಲ’- ಬಿಎಸ್ವೈ
- ಬೆಳಗಾವಿ : ಮಂತ್ರಿಗಳೆಲ್ಲ ತೆಲಂಗಾಣಕ್ಕೆ ಹೋಗಿ ಅಲ್ಲಿನ ಎಂಎಲ್ಎ ಗಳ ಸೇವೆ ಮಾಡ್ತಿದ್ದಾರೆ – ವಿಪಕ್ಷ ನಾಯಕ ಆರ್ ಅಶೋಕ ಕಿಡಿ
- 10 ಮಂದಿ ಬಿಜೆಪಿ ಸಂಸದರು ಸಂಸತ್ ಸ್ಥಾನಗಳಿಗೆ ರಾಜೀನಾಮೆ
- ಸರಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗಟ್ಟಲು ವಿಧೇಯಕ ಮಂಡನೆ
- ಉಧಂಪುರ ದಾಳಿ ಸಂಚುಕೋರ, 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ನ ಸಹಾಯಕ ಪಾಕ್ನಲ್ಲಿ ಹತ್ಯೆ
- ಕೊನೆಗೂ ಉರ್ಫಿ ಜಾವೇದ್ ಇನ್ಸ್ಟಾಗ್ರಾಮ್ ಅಕೌಂಟ್ ಡಿಲೀಟ್
- ‘ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡುತ್ತಿದ್ದವರು ಈಗ ಮುಸ್ಲಿಂ ದ್ವೇಷಿ’- ಹೆಚ್ಡಿಕೆಗೆ ದಿನೇಶ್ ಗುಂಡೂರಾವ್ ಟಾಂಗ್
- ಕೊಳವೆ ಬಾವಿಗೆ ಬಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಮೃತ್ಯು
- ಗುರಿ ತಪ್ಪಿದ ಸೇನಾ ಡ್ರೋನ್ ದಾಳಿ; 85 ಮಂದಿ ನಾಗರಿಕರು ಮೃತ್ಯು
- ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ ಹೆಚ್ಚಾಗಿ ಕಾಣಿಸುತ್ತದೆ – ಏಮ್ಸ್ ವರದಿ