ಭಾರತದ ಕ್ರಿಕೆಟಿಗ, ದಿಗ್ಗಜ ಆಟಗಾರ ಸಚಿನ್ ತೆಂಡೂಲ್ಕರ್ ಸಂಸ್ಥೆಯೊಂದರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ತನ್ನ ಹೆಸರನ್ನು ದುರ್ಬಳಕೆ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಸಚಿನ್ ತೆಂಡೂಲ್ಕರ್ ಈ ಪ್ರಕರಣ ದಾಖಲಿಸಿದ್ದಾರೆ.
ಉತ್ಪನ್ನಗಳನ್ನು ಕೊಳ್ಳಲು ಹಾಗೂ ಆನ್‌ಲೈನ್ ಸೇವೆಗೆ ಸಂಬಂಧಿಸಿದಂತೆ ನಾಗರಿಕರ ದಿಕ್ಕುತಪ್ಪಿಸಲು ಹೆಸರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲಿರುವ ನಳೀನ್ ಕುಮಾರ್ ಕಟೀಲ್
ಸಚಿನ್ ತೆಂಡೂಲ್ಕರ್ ದೂರು ನೀಡಿರುವ ಸಂಸ್ಥೆಯ ವ್ಯಕ್ತಿಗಳ ವಿರುದ್ಧ ವಂಚನೆ, ನಕಲಿ ಸಹಿ ಹಾಗೂ ಮಾನನಷ್ಟ ಮೊಕದ್ದಮೆಯನ್ನು ಹಾಕಲಾಗಿದೆ. ಮುಂಬೈ ಪೊಲೀಸ್ ಸೈಬರ್ ಸೆಲ್‌ನಲ್ಲಿ ಐಪಿಸಿಯ ಸೆಕ್ಷನ್ 426, 465 ಮತ್ತು 500 ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಆರ್‌ಟಿ ಮ್ಯಾನೇಜ್‌ಮೆಂಟ್ ಅಧಿಕೃತ ಹೇಳಿಕೆಯನ್ನು ಬಿಡುಗಡೆಗೊಳಿಸಿದೆ.