Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು.

0

ನವದೆಹಲಿ: ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

ಜ್ವರದ ಹಿನ್ನೆಲೆ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ವೈದ್ಯರು ಅವರ ಮೇಲೆ ನಿಗಾವಹಿಸಿದ್ದು, ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ತಿಳಿದು ಬಂದಿದೆ.

ಈ ಹಿಂದೆ ಸೋನಿಯಾ ಗಾಂಧಿ ಅವರು 2 ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು. ವೈರಲ್ ಉಸಿರಾಟದ ಸೋಂಕಿನ ಚಿಕಿತ್ಸೆಗಾಗಿ ಅವರನ್ನು ಜನವರಿ 12ರಂದು ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಜನವರಿ 17ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಮಾರ್ಚ್ 2ರಂದು ಜ್ವರದ ಕಾರಣ ಮತ್ತೆ ಇದೇ ಆಸ್ಪತ್ರೆಗೆ ದಾಖಲಾಗಿದ್ದರು.

Leave A Reply

Your email address will not be published.