ಬೆಳ್ತಂಗಡಿ: ಧರ್ಮಸ್ಥಳದ ಸಮೀಪ ಭೀಕರ ಅತ್ಯಾಚಾರಕ್ಕೀಡಾಗಿ ಕೊಲೆಗೀಡಾಗಿದ್ದ ಸೌಜನ್ಯ ಹತ್ಯೆ ಪ್ರಕರಣಕ್ಕೆ 11 ವರ್ಷಗಳ ಬಳಿಕ ಮರುಜೀವ ಬಂದಿದೆ. ಸಿಬಿಐ ವಿಶೇಷ ಕೋರ್ಟ್‌ನಲ್ಲಿ ಸಂತೋಷ್ ರಾವ್ ನಿರಪರಾಧಿ ಎಂದು ತೀರ್ಪು ಬರುತ್ತಲೇ ನಿಜವಾದ ಅಪರಾಧಿ ಯಾರು ಅನ್ನುವ ಪ್ರಶ್ನೆ ಎದ್ದಿದೆ? ಈ ನಡುವೆಯೇ ಸೌಜನ್ಯಳ ಮಾವ ಇದೀಗ ದೈವ ದೇವರಿಗೆ ಹರಕೆ ಹೊತ್ತಿರುವುದು ಸುದ್ದಿಯಾಗಿದೆ. ಸೌಜನ್ಯ ಕೊಲೆಗೆ ಕಾರಣವಾದ ಅಪರಾಧಿಗಳಿಗೆ ಇನ್ನು ಆರು ತಿಂಗಳ ಒಳಗಾಗಿ ಸರಿಯಾದ ಶಿಕ್ಷೆಯಾಗಬೇಕು, ಹಾಗಾದರೆ ನಾನು ಹರಕೆ ತೀರಿಸುತ್ತೇನೆ ಎಂದು ಪ್ರತಿಜ್ಞೆ ಮಾಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಠಲ ಗೌಡ ಪೋಸ್ಟ್‌ವೊಂದನ್ನು ಪ್ರಕಟಿಸಿದ್ದಾರೆ. ಇದರ ಸತ್ಯಾಸತ್ಯತೆಯ ಬಗ್ಗೆ ತಿಳಿದುಕೊಳ್ಳಲು ಮಾಧ್ಯಮ ಪ್ರತಿನಿಧಿಗಳು ಸಂಪರ್ಕಿಸಿದಾಗ ಮಾತನಾಡಿದ ಅವರು, ಸೌಜನ್ಯ ಅತ್ಯಾಚಾರಿಗಳಿಗೆ 6 ತಿಂಗಳೊಳಗೆ ಶಿಕ್ಷೆಯಾದ್ರೆ ಕಾನತ್ತೂರು ದೈವಗಳಿಗೆ ಬಂಗಾರ ನಾಲಿಗೆ, 1 ದಿನದ ನೇಮೋತ್ಸವವನ್ನು ನೀಡುತ್ತೇವೆ. ಧರ್ಮಸ್ಥಳದ ಮಂಜುನಾಥ ಸ್ವಾಮಿಗೆ ಬೆಳ್ಳಿ ರಥ, ಅಣ್ಣಪ್ಪನಿಗೆ ಬಂಗಾರದ ಕಡಸಾಲೆ ಹರಕೆಯಾಗಿ ಒಪ್ಪಿಸುವುದಾಗಿ ತಿಳಿಸಿದ್ದಾರೆ.
[vc_row][vc_column]
BREAKING NEWS
- ಚಿಕ್ಕ ರೇವಣಸಿದ್ಧ ಶಿವಶರಣರು ಲಿಂಗೈಕ್ಯ.!
- ಸೆ. 29 ಮತ್ತು 30ರಂದು ಮುಂಬೈ ಲೋಕಮಾನ್ಯ ತಿಲಕ್-ಮಂಗಳೂರು ಜಂಕ್ಷನ್ ರೈಲಿಗೆ ಹೆಚ್ಚುವರಿ ಕೋಚ್ – ರೈಲ್ವೆ ಇಲಾಖೆಯಿಂದ ಅಧಿಕೃತ ಪ್ರಕಟಣೆ
- ಪ್ರಧಾನಿ ಮೋದಿ ಅವರ ಆಸ್ತಿ, ಸಾಲ ಎಷ್ಟಿದೆ ಗೊತ್ತೇ ? – ಕಳೆದ ಬಾರಿಗಿಂತ 15.69 ಶೇಕಡಾ ಆಸ್ತಿ ಏರಿಕೆ..!!
- ‘ಸಂವಿಧಾನಬದ್ದ ಹಕ್ಕುಗಳನ್ನು ರಕ್ಷಿಸುವ ಪಣ ತೊಡಿ’-ನೂತನ ಡಿವೈಎಸ್ ಪಿಗಳಿಗೆ ಸಿಎಂ ಕರೆ
- ಕರಿಬೆಕ್ಕು ಅಂತ ಕರಿ ಚಿರತೆ ಸಾಕಿದ ರಷ್ಯಾದ ಯುವತಿ
- ಪಿಎಫ್ ಐ ಕಾರ್ಯಕರ್ತರಿಂದ ಯೋಧನ ಕಿಡ್ನಾಫ್ ಮಾಡಿ ಹಲ್ಲೆ ಪ್ರಕರಣಕ್ಕೆ ಟ್ವೀಟ್ಸ್ : ತನಿಖೆಯಲ್ಲಿ ಸತ್ಯ ಬಯಲು
- ‘ಧಾರ್ಮಿಕ ಗ್ರಂಥಗಳಿಗೆ ಹಕ್ಕುಸ್ವಾಮ್ಯ ಇಲ್ಲ’- ಹೈಕೋರ್ಟ್
- ‘ಈಗ ಕರ್ನಾಟಕದಲ್ಲಿ ಪೊಲೀಸ್ ಸರ್ಕಾರ ಇದೆ’ – ಬೊಮ್ಮಾಯಿ ವಾಗ್ದಾಳಿ
- ಸಂಪೂರ್ಣ ಬದಲಾದ ಜಿಂಕೆ ಮರಿ ರೇಖಾ – ನಟಿ ಈಗಿನ ಸ್ಥಿತಿ ನೋಡಿ ಶಾಕ್ ಆದ ಅಭಿಮಾನಿಗಳು
- ಹೆಣ್ಣು ಮಗುವಿನ ತಾಯಿಯಾದ ನಟಿ ಸ್ವರಾ ಭಾಸ್ಕರ್