Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಸೌಜನ್ಯ ಅತ್ಯಾಚಾರ – ಕೊಲೆ ಪ್ರಕರಣದ ಹೇಳಿಕೆ: ಉಲ್ಟಾ ಹೊಡೆದ ಮಾಜಿ ಶಾಸಕ ವಸಂತ ಬಂಗೇರ

0

ಬೆಳ್ತಂಗಡಿ : ವಿದ್ಯಾರ್ಥಿನಿ ಸೌಜನ್ಯ ಕೊಲೆ,ಅತ್ಯಾಚಾರ ಪ್ರಕರಣದಲ್ಲಿ ಸತ್ಯ ಹೇಳಿದರೆ ನನ್ನನ್ನು ಮುಗಿಸಿ ಬಿಡುತ್ತಾರೆ ಎಂಬ ಹೇಳಿಕೆಯಿಂದ ಇದೀಗ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಉಲ್ಟಾ ಹೊಡೆದಿದ್ದಾರೆ.

ಪುತ್ತೂರಿನಲ್ಲಿ ಮಾತನಾಡಿದ ಅವರು ಸೌಜನ್ಯ ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಿದ್ದೇ ನಾನು, ವಿಧಾನಸಭೆಯಲ್ಲಿ ಈ ಬಗ್ಗೆ ಒತ್ತಾಯ ಮಾಡಿರುವುದೇ ನಾನು, 6 ತಿಂಗಳು ಸಿಬಿಐ ಚೆನ್ನಾಗಿ ತನಿಖೆ ಮಾಡಿದೆ, ಆದರೆ 6 ತಿಂಗಳ ಬಳಿಕ ಸಿಬಿಐ ಕವಚಿ ಬಿದ್ದಿದ್ದು, ತಪ್ಪು ದಾರಿಯಲ್ಲಿ ಹೋಗಿದೆ. ನನ್ನ ಪ್ರಕಾರ ಈ ಪ್ರಕರಣವನ್ನು ತನಿಖೆ ಮಾಡಿ ಆರೋಪಿಗಳ ಪತ್ತೆ ಹಚ್ಚಲು ಸಾಧ್ಯ, ಸಂದರ್ಭ ಬಂದಾಗ ಸೌಜನ್ಯ ವಿಚಾರದಲ್ಲಿ ಹೇಳಬೇಕಾದ ವಿಚಾರವನ್ನು ಹೇಳುತ್ತೇನೆ.

ಆದರೆ ಸತ್ಯ ಹೇಳಿದರೆ ನನ್ನನ್ನು ಕೊಲ್ಲುತ್ತಾರೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು ನಾನು ಆ ರೀತಿ ಮಾತೇ ಆಡಿಲ್ಲ ಎಂದ ಅವರು ಜೀವಂತವಾಗಿ ಯಾರಿಗೂ ನನ್ನನ್ನು ಕೊಲ್ಲಲು ಸಾಧ್ಯವಿಲ್ಲ, ಜಿಲ್ಲೆಯಲ್ಲಿ,ತಾಲೂಕಿನಲ್ಲಿ ಎಷ್ಟೇ ದೊಡ್ಡವರಿಗೂ ಒಬ್ಬನನ್ನು ಕೊಲ್ಲಲು ಸಾಧ್ಯವಿಲ್ಲ, ಬೆಳ್ತಂಗಡಿಯಲ್ಲಿ ನಡೆದ ಸಭೆಯಲ್ಲಿ ದೇವರು ನನ್ನನ್ನು ರಕ್ಷಣೆ ಮಾಡುತ್ತಾರೆ ಎಂದಿದ್ದೆ, ಆದರೆ ನನ್ನ ಮಾತನ್ನು ಮಾಧ್ಯಮಗಳ ತಿರುಚಿವೆ.

Leave A Reply

Your email address will not be published.