Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಸೌಜನ್ಯ ಕೇಸ್ ರಹಸ್ಯಗಳನ್ನ ಬಿಚ್ಚಿಟ್ಟರೆ ನನ್ನನ್ನು ಸಾಯಿಸಬಹುದು: ವಸಂತ ಬಂಗೇರ ಸ್ಟೋಟಕ ಹೇಳಿಕೆ

0

ಬೆಳ್ತಂಗಡಿ: ಬೆಳ್ತಂಗಡಿ ಮಾಜಿ ಕಾಂಗ್ರೆಸ್ ಶಾಸಕ ವಸಂತ ಬಂಗೇರ ಧರ್ಮಸ್ಥಳ ಸೌಜನ್ಯ ರೇಪ್ ಅಂಡ್ ಮರ್ಡರ್ ಕೇಸ್ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಬೆಳ್ತಂಗಡಿಯಲ್ಲಿ ಹೇಳಿಕೆ ನೀಡಿದ ಅವರು, ಸೌಜನ್ಯ ಪ್ರಕರಣದ ಈ ರಹಸ್ಯವನ್ನು ಬಿಚ್ಚಿಟ್ಟರೆ ನನ್ನನ್ನೂ ಸಾಯಿಸಬಹುದು ಎಂದು ಬಹಿರಂಗವಾಗಿ ಹೇಳಿದ್ದಾರೆ. “ನಾನು ಶಾಸಕನಾಗಿದ್ದಾಗ ಅಧಿವೇಶನದಲ್ಲಿ ಸೌಜನ್ಯ ಕೇಸ್ ಸಿಬಿಐಗೆ ವಹಿಸಲು ಆಗ್ರಹಿಸಿದ್ದೆ ” ಆದರೆ, ಸಿಬಿಐ ತನಿಖೆಯ ದಾರಿ ತಪ್ಪಿಸಲಾಗಿತ್ತು ಎಂದರು. ನನ್ನನ್ನ ಕರೆದು ಹೇಳಿದ್ರು ಇದನ್ನ ಪ್ರಸ್ತಾಪ ಮಾಡಬೇಡ …ಈ ಕೇಸನ್ನ ಸಿಬಿಐಗೆ ವಹಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದರು. ಆದರೆ, ನಾನು ಸುಮಾರು ಒಂದೂ ಗಂಟೆಗೂ ಅಧಿಕ ಮುಖ್ಯಮಂತ್ರಿಗಳೊಂದಿಗೆ ಚರ್ಚೆ ಮಾಡಿದೆ. ಕೇವಲ ಸೌಜನ್ಯ ಪ್ರಕರಣ ಮಾತ್ರವಲ್ಲ ಬೆಳ್ತಂಗಡಿಯಲ್ಲಿ ನಡೆದ ಅಮಾನುಷ ಹತ್ಯೆಗಳ ಬಗ್ಗೆ ಅವರಿಗೆ ತಿಳಿಸಿದೆ. ಕೊನೆಗೆ ಸಿದ್ದರಾಮಯ್ಯನವರು ಅಧಿವೇಶನದಲ್ಲಿ ಸೌಜನ್ಯ ಪ್ರಕರಣವನ್ನ ಸಿಬಿಐಗೆ ವಹಿಸಿದೆ ಎಂದರು. ಸಿಬಿಐ ತನಿಖೆಯಲ್ಲಿ ನ್ಯಾಯ ಸಿಗುತ್ತೆ ಎಂಬ ನಂಬಿಕೆ ನನಗಿತ್ತು. ಆದರೆ ಸಿಬಿಐ ತನಿಖೆಯ ಅರ್ಧದಲ್ಲಿ ಇದರಲ್ಲಿ ಮೋಸ ಇದೆ ಎನ್ನೋದು ನನಗೆ ತಿಳಿಯಿತು. ಅದನ್ನ ಸಾರ್ವಜನಿಕವಾಗಿ ನಿಮ್ಮ ಮುಂದೆ ಹೇಳಲು ಸಾಧ್ಯವಿಲ್ಲ. ಆದರೆ ಸಂದರ್ಭ ಬಂದಾಗ ನಾನು ಪ್ರಸ್ತಾಪಿಸಿಯೇ ಸಿದ್ದ. ಒಂದಲ್ಲ ಒಂದು ದಿನ ಅದನ್ನು ಹೇಳಲು ಕಾಲ ಬರುತ್ತದೆ ಎಂದು ಆಕ್ರೋಶ ಹೊರಹಾಕಿದರು. ಅವತ್ತು ಸೌಜನ್ಯ ಪ್ರಕರಣದ ದಿಕ್ಕು ತಪ್ಪಿಸಿದ್ದು ಯಾರು ..ಅನ್ಯಾಯ ತೊಂದರೆ ಕೊಟ್ಟಿದ್ದು ಯಾರು ಎಂದು ಹೇಳುತ್ತೇನೆ. ಆದರೆ ಅವರು ನನ್ನನ್ನು ಸಾಯಿಸಿದ್ರು ಸಾಯಿಸಬಹುದು. ಅಂತೂ ನನ್ನ ಅಂತ್ಯದೊಳಗೆ ಸೌಜನ್ಯ ಪ್ರಕರಣಕ್ಕೆ ನ್ಯಾಯ ಕೊಡಿಸಿಯೇ ಸಿದ್ದ ಎಂದು ಹೇಳಿದರು. ಸಿದ್ದರಾಮಯ್ಯನವರನ್ನು ಏಕಾಂಗಿಯಾಗಿ ಭೇಟಿಯಾಗಿ ಈ ಪ್ರಕರಣವನ್ನ ಹೇಗೆ ತನಿಖೆ ಮಾಡಬೇಕೆಂಬುದನ್ನ ಹೇಳುತ್ತೇನೆ. ಇದನ್ನ ಈ ರೀತಿ ತನಿಖೆ ಮಾಡಬೇಕು. ಇಂತವರನ್ನೇ ತನಿಖೆ ಮಾಡಬೇಕು ಎಂದು ಹೇಳುತ್ತೇನೆ. ಖಾಕಿಯವರನ್ನೂ ಕೈ ಕಾಲು ಕಟ್ಟಿ ತನಿಖೆ ಮಾಡಿಸಿ ಎಂದು ಸಿದ್ದರಾಮಯ್ಯನವರಿಗೆ ತಿಳಿಸುತ್ತೇನೆ. ತಪ್ಪು ಮಾಡಿದವನೂ ಎಷ್ಟೇ ದೊಡ್ಡ ವ್ಯಕ್ತಿಯಾಗಿದ್ದರೂ ಶಿಕ್ಷೆ ಅನುಭವಿಸಲೇ ಬೇಕು. ಸೌಜನ್ಯ ಕುಟುಂಬಸ್ಥರನ್ನ ಮುಖ್ಯಮಂತ್ರಿಗಳಿಗೆ ಖುದ್ದು ನಾನೇ ಭೇಟಿ ಮಾಡಿಸಿದ್ದೇನೆ. ಮುಖ್ಯಮಂತ್ರಿಗಳಿಗೂ ಸೌಜನ್ಯ ಪ್ರಕರಣದ ಗಂಭೀರತೆ ಅರಿವಿಗೆ ಬಂದಿದೆ ಎಂದರು. ಇದೀಗ ಈ ಹೇಳಿಕೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಬಾರಿ ಸಂಚಲನಕ್ಕೆ ಕಾರಣವಾಗಿದೆ.

Leave A Reply

Your email address will not be published.