ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಸಂತ್ರಸ್ತೆಗೆ ನ್ಯಾಯ ಸಿಗಬೇಕು ಎಂದು ಹಾಕಿರುವ ಬ್ಯಾನರ್‌ಗಳ ತೆರವಿಗೆ ಆದೇಶ ಹೊರಡಿಸಲಾಗಿದೆ. ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವಿಗೆ ಸೂಚನೆ ಬೆಳ್ತಂಗಡಿ ತಾಲೂಕು ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಆದೇಶ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಪ್ರಜ್ಞಾವಂತ ನಾಗರಿಕರು, ಬೆಳ್ತಂಗಡಿ ಎಂಬ ಹೆಸರಿನಲ್ಲಿ ತಾಲೂಕಿನಾದ್ಯಂತ ಹಾಕಲಾದ ಸೌಜನ್ಯ ಪರ ಬ್ಯಾನರ್ ತೆರವು ಮಾಡುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಲಾಗಿತ್ತು. ಈ ದೂರಿನಲ್ಲಿ ದೂರಿನಲ್ಲಿ ಕು. ಸೌಜನ್ಯ ಪ್ರಕರಣದ ತೀರ್ಪನ್ನು ಬಹಿರಂಗವಾಗಿ ಟೀಕಿಸುತ್ತಿದ್ದಾರೆ. ‘ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕದಡುವ ನಿಟ್ಟಿನಲ್ಲಿ’, ‘ಯಾರು ಯಾರನ್ನೋ ಆರೋಪಿತರನ್ನಾಗಿ ಬಿಂಬಿಸಿಕೊಂಡು’ ‘ಧರ್ಮ ಧರ್ಮಗಳ ನಡುವೆ ಒಡಕು ಉಂಟು ಮಾಡಲಾಗುತ್ತಿದೆ’ ‘ಇದರಿಂದಾಗಿ ಸಮಾಜದಲ್ಲ, ಅಶಾಂತಿ ಉಂಟಾಗಿ, ಕಾನೂನು ಸುವ್ಯವಸ್ಥೆಗೆ ಧಕ್ಕೆ ಯಾಗುವ ಸಾಧ್ಯತೆ ಹೆಚ್ಚಾಗಿರುತ್ತದೆ’ ‘ಆದುದರಿಂದ ಸಾರ್ವಜನಿಕ ಸ್ಥಳಗಳಲ್ಲಿ, ರಸ್ತೆ ಬದಿಗಳಲ್ಲಿ ಅನಧಿಕೃತವಾಗಿ’ ‘ಕಾನೂನು ಬಾಹಿರವಾಗಿ ಅಳವಡಿಸಿರುವ ಸೌಜನ್ಯ ಪ್ರಕರಣಗಳಿಗೆ ಸಂಬಂಧಿಸಿದ ಪ್ಲೆಕ್ಸ್ ಗಳನ್ನು ಕೂಡಲೇ ತೆರವುಗೊಳಿಸಬೇಕು’ ಎಂದು ದ.ಕ ಜಿಲ್ಲಾ ಎಸ್ಪಿಗೆ ದೂರು ಸಲ್ಲಿಸಲಾಗಿತ್ತು. ಅದರನ್ವಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬೆಳ್ತಂಗಡಿ ಸರ್ಕಲ್ ಇನ್ಸ್ ಪೆಕ್ಟರ್ ಪತ್ರ ಬರೆದು ಸೂಚನೆ ನೀಡಿದ ಹಿನ್ನೆಲೆ ಬೆಳ್ತಂಗಡಿ ತಾಲೂಕು ಪಿಡಿಓಗಳಿಗೆ ಬ್ಯಾನರ್ ತೆರವು ಮಾಡುವಂತೆ ಆದೇಶ ಹೊರಡಿಸಲಾಗಿದೆ.
[vc_row][vc_column]
BREAKING NEWS
- ‘ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ನ ಲೆಕ್ಕಾಚಾರದ ತಂತ್ರಗಳು ಕೆಲಸ ಮಾಡುವುದಿಲ್ಲ’- ಬಿಎಸ್ವೈ
- ಬೆಳಗಾವಿ : ಮಂತ್ರಿಗಳೆಲ್ಲ ತೆಲಂಗಾಣಕ್ಕೆ ಹೋಗಿ ಅಲ್ಲಿನ ಎಂಎಲ್ಎ ಗಳ ಸೇವೆ ಮಾಡ್ತಿದ್ದಾರೆ – ವಿಪಕ್ಷ ನಾಯಕ ಆರ್ ಅಶೋಕ ಕಿಡಿ
- 10 ಮಂದಿ ಬಿಜೆಪಿ ಸಂಸದರು ಸಂಸತ್ ಸ್ಥಾನಗಳಿಗೆ ರಾಜೀನಾಮೆ
- ಸರಕಾರಿ ಹುದ್ದೆಗಳ ನೇಮಕಾತಿ ಅಕ್ರಮ ತಡೆಗಟ್ಟಲು ವಿಧೇಯಕ ಮಂಡನೆ
- ಉಧಂಪುರ ದಾಳಿ ಸಂಚುಕೋರ, 26/11 ಮಾಸ್ಟರ್ ಮೈಂಡ್ ಹಫೀಜ್ ಸಯೀದ್ನ ಸಹಾಯಕ ಪಾಕ್ನಲ್ಲಿ ಹತ್ಯೆ
- ಕೊನೆಗೂ ಉರ್ಫಿ ಜಾವೇದ್ ಇನ್ಸ್ಟಾಗ್ರಾಮ್ ಅಕೌಂಟ್ ಡಿಲೀಟ್
- ‘ತೊಡೆಯ ಮೇಲೆ ಕೂರಿಸಿಕೊಂಡು ಮುದ್ದಾಡುತ್ತಿದ್ದವರು ಈಗ ಮುಸ್ಲಿಂ ದ್ವೇಷಿ’- ಹೆಚ್ಡಿಕೆಗೆ ದಿನೇಶ್ ಗುಂಡೂರಾವ್ ಟಾಂಗ್
- ಕೊಳವೆ ಬಾವಿಗೆ ಬಿದ್ದ ಬಾಲಕಿ ಚಿಕಿತ್ಸೆ ಫಲಿಸದೆ ಮೃತ್ಯು
- ಗುರಿ ತಪ್ಪಿದ ಸೇನಾ ಡ್ರೋನ್ ದಾಳಿ; 85 ಮಂದಿ ನಾಗರಿಕರು ಮೃತ್ಯು
- ಪ್ಯಾಕಿಂಗ್ ಆಹಾರ ಉತ್ಪನ್ನಗಳಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆ ಹೆಚ್ಚಾಗಿ ಕಾಣಿಸುತ್ತದೆ – ಏಮ್ಸ್ ವರದಿ