ಚಂಡೀಗಢ : ಹರಿಯಾಣದಲ್ಲಿ ಸಂಭವಿಸಿದ ಕೋಮುಗಲಭೆಯಲ್ಲಿ ಐದು ಮಂದಿ ಸಾವನ್ನಪ್ಪಿದ್ದು, ಇತರ 45 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗುರುಗ್ರಾಮ್‍ಗೆ ಹೊಂದಿಕೊಂಡಿರುವ ಹರಿಯಾಣದ ನುಹ್‍ನಲ್ಲಿ ನಡೆದ ಧಾರ್ಮಿಕ ಮೆರವಣಿಗೆಯಲ್ಲಿ ಘರ್ಷಣೆ ಪ್ರಾರಂಭವಾಗಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಇಬ್ಬರು ಗೃಹ ರಕ್ಷಕ ಸಿಬ್ಬಂದಿಗಳು ಸೇರಿದಂತೆ ಐವರು ಸಾವನ್ನಪ್ಪಿದ್ದು, ಕನಿಷ್ಠ 45 ಮಂದಿ ಗಾಯಗೊಂಡಿದ್ದಾರೆ. ಸೋಮವಾರ ವಿಶ್ವ ಹಿಂದು ಪರಿಷತ್ (ವಿಎಚ್ಪಿ) ಮೆರವಣಿಗೆಯ ಸಮಯದಲ್ಲಿ ಸಂದರ್ಭದಲ್ಲಿ ಕೆಲ ಗುಂಪಿನ ಜನರು ವಿಶ್ವ ಹಿಂದು ಪರಿಷತ್ತಿನ ಮೆರವಣಿಗೆಯನ್ನು ತಡೆಯಲು ಪ್ರಯತ್ನಿಸಿದಾಗ ಹಿಂಸಾಚಾರ ಮೊದಲು ಭುಗಿಲೆದ್ದಿತು. ಎರಡು ಗುಂಪುಗಳ ನಡುವೆ ಘರ್ಷಣೆ ಭುಗಿಲೆದ್ದಿದ್ದರಿಂದ ಕಲ್ಲು ತೂರಾಟ ನಡೆಸಿ ಕಾರುಗಳಿಗೆ ಬೆಂಕಿ ಹಚ್ಚಲಾಗಿದೆ. ಹಿಂಸಾತ್ಮಕ ಘಟನೆಗಳ ಹಿನ್ನೆಲೆಯಲ್ಲಿ ಗುರುಗ್ರಾಮ ಮತ್ತು ಫರಿದಾಬಾದ್‌ನಲ್ಲಿರುವ ಎಲ್ಲ ಶಾಲಾ ಮತ್ತು ಕಾಲೇಜುಗಳಿಗೆ ಇಂದು ರಜೆ ಘೋಷಣೆ ಮಾಡಲಾಗಿದೆ. ಗುರುಗ್ರಾಮ ಮತ್ತು ನುಹ್‌ನಲ್ಲಿ ಕೋಡ್ ಆಫ್ ಕ್ರಿಮಿನಲ್ ಪ್ರೊಸಿಜರ್ (ಸಿಆರ್ಪಿಸಿ) ಸೆಕ್ಷನ್ 144ರ ಅಡಿಯಲ್ಲಿ ನಿಷೇಧಾಜ್ಞೆಗಳನ್ನು ವಿಧಿಸಲಾಗಿದೆ. ತೀವ್ರವಾಗಿ ಕೋಮು ಉದ್ವಿಗ್ನತೆಯನ್ನು ನಿಯಂತ್ರಿಸಲು ನುಹ್ ಜಿಲ್ಲೆಯಲ್ಲಿ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಆಗಸ್ಟ್ 2ರ ಬುಧವಾರದವರೆಗೆ ಸ್ಥಗಿತಗೊಳಿಸಲಾಗಿದೆ ಎಂದು ಹರಿಯಾಣ ಸರ್ಕಾರ ತಿಳಿಸಿದೆ.
[vc_row][vc_column]
BREAKING NEWS
- ವಂಚನೆ ಪ್ರಕರಣ: ಆರೋಪಿ ಚೈತ್ರಾ ಕುಂದಾಪುರ, ಶ್ರೀಕಾಂತ್ಗೆ ಜಾಮೀನು
- ಪ್ರಾಂಜಲ್ ಕುಟುಂಬಕ್ಕೆ ₹50 ಲಕ್ಷ ಪರಿಹಾರ ಚೆಕ್ ಇಂದು ಹಸ್ತಾಂತರ: ಸಿಎಂ
- ತೆಲಂಗಾಣ ಸಿಎಂ ಆಯ್ಕೆ ತೀರ್ಮಾನ ಎಐಸಿಸಿ ಅಧ್ಯಕ್ಷರ ಹೆಗಲಿಗೆ: ಡಿಕೆಶಿ
- ಮಿಚಾಂಗ್ ಅಬ್ಬರಕ್ಕೆ ಮುಳುಗಿದ ಚೆನ್ನೈ
- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಲೋಕಾಯುಕ್ತ ಶಾಕ್ – ಬೆಂಗಳೂರು ಸೇರಿ ರಾಜ್ಯದ 63 ಕಡೆ ದಾಳಿ
- 200 ಟನ್ ಮೆಕ್ಕೆಜೋಳ ಕುಸಿತ ಪ್ರಕರಣ: ಮೂವರು ಕಾರ್ಮಿಕರ ಸಾವು
- ಬ್ರೇಕಿಂಗ್ ಇಂದು ಬೆಳ್ಳಂಬೆಳಗ್ಗೆ 63 ಕಡೆ ಲೋಕಾಯುಕ್ತ ದಾಳಿ.!
- ತಡರಾತ್ರಿ ಫುಡ್ಸ್ ಗೋದಾಮಿನ ಸಂಸ್ಕರಣಾ ಘಟಕದಲ್ಲಿ ಮೆಕ್ಕೆಜೋಳ ಕುಸಿತ ಮೂವರು ಸಾವು.!
- ಮಿಚಾಂಗ್ ಚಂಡಮಾರುತ ಎಫೆಕ್ಟ್ ರಾಜ್ಯದಲ್ಲಿ ಈ ಜಿಲ್ಲೆಗಳಲ್ಲಿ ಮಳೆ.!
- ಕೊಡಗು ಸೈನಿಕ ಶಾಲೆ ಪ್ರವೇಶಕ್ಕೆ ಅರ್ಜಿ ಆಹ್ವಾನ