ಹಾಸನ: ಮಧ್ಯಾಹ್ನ ಹಲ್ಲಿ ಬಿದ್ದ ಬಿಸಿಯೂಟ ಸೇವಿಸಿ ಹಾಸನ ಜಿಲ್ಲೆಯ ಅರಕಲಗೂಡು ರಾಗಿಮರೂರು ಸರ್ಕಾರಿ ಪ್ರೌಢಶಾಲೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ನಡೆದಿದೆ.
ಕೊಣನೂರಿನ ಸಮುದಾಯ ಆರೋಗ್ಯ ಕೇಂದ್ರ ಮತ್ತು ಅರಕಲಗೂಡು ತಾಲೂಕು ಆಸ್ಪತ್ರೆಯಲ್ಲಿ ಅಸ್ವಸ್ಥ ವಿದ್ಯಾರ್ಥಿಗಳನ್ನು ಸೇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ಅಸ್ವಸ್ಥಗೊಂಡ ಮಕ್ಕಳನ್ನು ಹಾಸನ ಜಿಲ್ಲಾಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.