ಶಿಮ್ಲಾ: ಹಿಮಾಚಲ ಪ್ರದೇಶದ ಸೋಲನ್ ಜಿಲ್ಲೆಯಲ್ಲಿ ಮೇಘಸ್ಫೋಟ ಸಂಭವಿಸಿದ್ದು, 7 ಮಂದಿ ಸಾವನ್ನಪ್ಪಿದ್ದು, ಒಬ್ಬರು ಕಾಣೆಯಾದ ಘಟನೆ ನಡೆದಿದೆ.
ಸೋಲನ್‌ನ ಕಂದಘಾಟ್‌ನ ಜಾಡೋನ್ ಗ್ರಾಮದಲ್ಲಿ ಮೇಘಸ್ಫೋಟ ಸಂಭವಿಸಿದ ನಂತರ ಐವರನ್ನು ರಕ್ಷಿಸಲಾಗಿದೆ. 2 ಮನೆಗಳು ಹಾಗೂ ಒಂದು ದನದ ಕೊಟ್ಟಿಗೆ ಕೊಚ್ಚಿಕೊಂಡು ಹೋಗಿರುವುದಾಗಿ ವರದಿಯಾಗಿದೆ.
ದುರ್ಘಟನೆ ಬಳಿಕ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಅವರು ಟ್ವಿಟ್ಟರ್‌ನಲ್ಲಿ ಸಂತಾಪ ಸೂಚಿಸಿದ್ದಾರೆ. ಸಂತ್ರಸ್ತ ಕುಟುಂಬಗಳಿಗೆ ಸಾಧ್ಯವಿರುವ ಎಲ್ಲಾ ನೆರವು ಹಾಗೂ ಬೆಂಬಲವನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡುವುದಾಗಿ ತಿಳಿಸಿದ್ದಾರೆ.
ಭಾರೀ ಮೆಳೆಯ ಹಿನ್ನೆಲೆ ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಗುಡ್ಡಗಾಡಿನ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗುವುದು. ಹಾನಿಯ ಕುರಿತು ಪ್ರತಿಕ್ರಿಯೆಗಾಗಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದೇನೆ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ.