Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

BREAKING NEWS

[/vc_column][/vc_row]

ಹುಬ್ಬಳ್ಳಿ ಜಿಲ್ಲೆಯಲ್ಲಿ 96 ಅಂಗನವಾಡಿ ನವೀಕರಣ – ನಂದಘರ್ ಬಗ್ಗೆ ಕೇಂದ್ರ ಸಚಿವ ಜೋಶಿ ಮಾಹಿತಿ

0

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ವೇದಾಂತ ಕಂಪನಿಯ ಕಾರ್ಪೊರೇಟ್ ಕಂಪನಿಗಳ ಸಾಮಾಜಿಕ ಹೊಣೆಗಾರಿಕೆ ಚಟುವಟಿಕೆಯಡಿ (ಸಿಎಸ್ಆರ್) 5 ಹೊಸ ಅಂಗನವಾಡಿ ಕೇಂದ್ರಗಳ ನಿರ್ಮಾಣ ಸೇರಿದಂತೆ ಒಟ್ಟು 96 ಅಂಗನವಾಡಿ ಕೇಂದ್ರಗಳನ್ನು ಸುಸಜ್ಜಿತ ನಂದಘರ್ ಕೇಂದ್ರಗಳನ್ನಾಗಿ ನವೀಕರಿಸಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದ್ದಾರೆ. ಎನ್‌ಎಂಡಿಸಿಯ ಸಿಎಸ್ಆರ್ ಅಡಿ 10 ಅಂಗನವಾಡಿ ಹಾಗೂ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ 9 ಅಂಗನವಾಡಿ ಕಟ್ಟಡಗಳನ್ನು ನಿರ್ಮಿಸಲಾಗಿದೆ ಎಂದು ಹೇಳಿದ್ದಾರೆ. ನಂದಘರ್‌ ಕೇಂದ್ರಗಳಲ್ಲಿ ಮಕ್ಕಳಿಗೆ ಆಸನಗಳ ವ್ಯವಸ್ಥೆ, ಸೌರ ವಿದ್ಯುತ್ ವ್ಯವಸ್ಥೆ, ಶುದ್ಧ ಕುಡಿಯುವ ನೀರಿಗಾಗಿ ವಾಟರ್ ಫಿಲ್ಟರ್ ವ್ಯವಸ್ಥೆ, ಸುಸಜ್ಜಿತ ಶೌಚಾಲಯ, ಸ್ಮಾರ್ಟ್ ಟಿ.ವಿ.ಮೂಲಕ ಇ-ಕಲಿಕೆ ವ್ಯವಸ್ಥೆ, ಆಟಿಕೆ ಸಾಮಗ್ರಿಗಳು ಸೇರಿದಂತೆ ವಿವಿಧ ಸೌಲಭ್ಯಗಳಿವೆ ಎಂದಿದ್ದಾರೆ. ಶಿಗ್ಗಾವಿ ತಾಲ್ಲೂಕಿನ ಹಿರೆಬೆಂಡಿಗೇರಿ, ಸವಣೂರು ಪಟ್ಟಣ, ಕುಂದಗೋಳ ತಾಲ್ಲೂಕಿನ ಗುಡೇನಕಟ್ಟಿ, ನವಲಗುಂದ ತಾಲ್ಲೂಕಿನ ಮೊರಬ ಹಾಗೂ ಧಾರವಾಡ ತಾಲ್ಲೂಕಿನ ನುಗ್ಗಿಕೇರಿ ಗ್ರಾಮಗಳಲ್ಲಿ ಶಿಥಿಲಾವಸ್ಥೆಯಲ್ಲಿರುವ ಅಂಗನವಾಡಿ ಕೇಂದ್ರಗಳನ್ನು ತೆರವುಗೊಳಿಸಿ 5 ನಂದಘರ್ ಕೇಂದ್ರಗಳನ್ನು ನಿರ್ಮಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಮಕ್ಕಳಿಗೆ ಪೂರ್ವ ಪ್ರಾಥಮಿಕ ಹಂತದಿಂದಲೇ ಕಂಪ್ಯೂಟರ್ ಆಧಾರಿತ ಕಲಿಕೆ ಕೈಗೊಳ್ಳಲಾಗುತ್ತಿದೆ. ರೈಮ್ಸ್‌ಗಳನ್ನು ವಿಡಿಯೊ ಮೂಲಕ ಕಲಿಸಲಾಗುತ್ತದೆ. ಇದರಿಂದ ಪರಿಣಾಮಕಾರಿ ಕಲಿಕೆ ಸಾಧ್ಯವಾಗಲಿದ್ದು, ಆರಂಭಿಕ ಹಂತದಿಂದಲೇ ಮಕ್ಕಳಿಗೆ ಇ-ಕಲಿಕೆ ಪರಿಚಯ, ಜ್ಞಾನ ದೊರೆಯಲಿದೆ. ಇದರಿಂದ ತಂತ್ರಜ್ಷಾನ ಆಧಾರಿತ ಕಲಿಕೆಗೆ ಮಕ್ಕಳು ಸುಲಭವಾಗಿ ಹೊಂದಿಕೊಳ್ಳುತ್ತಾರೆ’ ಎಂದು ತಿಳಿಸಿದ್ದಾರೆ.

Leave A Reply

Your email address will not be published.