Bcsuddi Kannada News
www.bcsuddi.com is an Kannada web portal founded by Basavaraju C. The website provides news updates, karnataka, india, world, sports, entertainment, film news in Kannada

[vc_row][vc_column]

[/vc_column][/vc_row]

’ಹೊಸ ಬಿಪಿಎಲ್ ಕಾರ್ಡ್ ಗಳ ವಿತರಣೆ ’- ಕೆ.ಎಚ್‌ ಮುನಿಯಪ್ಪ

0

ಬೆಂಗಳೂರು:ಹೊಸ ಬಿಪಿಎಲ್  ಕಾರ್ಡ್ ಗಳನ್ನು  ಶೀಘ್ರದಲ್ಲಿ ವಿತರಣೆ ಮಾಡಲಾಗುವುದು ಎಂದು ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಹೇಳಿದ್ದಾರೆ.

ಈ ಕುರಿತು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಬಿಪಿಎಲ್ ಪಡಿತರ ಚೀಟಿ ಕೋರಿ ಅರ್ಜಿ ಸಲ್ಲಿಸಿರುವವರಿಗೆ ಕಾರ್ಡ್‌ಗಳನ್ನು ಆದಷ್ಟು ಬೇಗ ನೀಡುವ ಪ್ರಕ್ರಿಯೆ ನಡೆಯಲಿದೆ.  ಈ ವರೆಗೂ ಬಂದ ಅರ್ಜಿಗಳನ್ನು ಪರಿಶೀಲಿಸಿ ಕಾರ್ಡ್ ವಿತರಿಸಲಾಗುವುದು ಎಂದು ತಿಳಿಸಿದರು.

ಈಗಾಗಲೇ ಹೊಸದಾಗಿ ಬಿಪಿಎಲ್ ಕಾರ್ಡ್ ಕೋರಿ 3 ಲಕ್ಷ ಅರ್ಜಿಗಳು ಬಂದಿವೆ. ಇದರಲ್ಲಿ ಕೆಲವರು ಪಡಿತರ ಬೇಡ ಆರೋಗ್ಯ ಯೋಜನೆಗಾಗಿ ಪಡಿತರ ಚೀಟಿ ನೀಡಿ ಎಂದು ಕೋರಿದ್ದಾರೆ. ಹಾಗಾಗಿ, ಇಂತಹವರಿಗೆ ಆದಷ್ಟು ಬೇಗ ಕಾರ್ಡ್ ನೀಡಲು ಕ್ರಮಕೈಗೊಳ್ಳಲಾಗುವುದು ಎಂದರು.

ಆರೋಗ್ಯ ಯೋಜನೆಗಾಗಿ -ಬಿಪಿಎಲ್-ಎಬಿ ಕಾರ್ಡ್‌

ಆರೋಗ್ಯ ಯೋಜನೆಗಾಗಿ ಕಾರ್ಡ್ ಬಯಸಿರುವವರಿಗೆ ಬಿಪಿಎಲ್-ಎಬಿ ಎಂದು ನಮೂದಿಸಿ ಕಾರ್ಡ್ ನೀಡುವ ಚಿಂತನೆ ಇದೆ. ಇಂತಹವರಿಗೆ ಪಡಿತರ ಯೋಜನೆಯ ಲಾಭ ಇರುವುದಿಲ್ಲ. ಆದರೆ, ಆರೋಗ್ಯ ಯೋಜನೆಗೆ ಸಂಬಂಧಿಸಿದಂತೆ ಬಿಪಿಎಲ್‌ -ಎಬಿ ಕಾರ್ಡ್‌ನ್ನು ಉಪಯೋಗಿಸಿಕೊಳ್ಳಬಹದು . ಈ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಆದಷ್ಟು ಬೇಗ ಕಾರ್ಡ್ ವಿತರಿಸಲು ಕ್ರಮಕೈಗೊಳ್ಳುದಾಗಿ ತಿಳಿಸಿದರು.

 

 

Leave A Reply

Your email address will not be published.