ಬೆಂಗಳೂರು: ಅಂಗಡಿ-ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಗೊಳಿಸುವ ವಿಚಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದಾರೆ.
ಕನ್ನಡ ಕಡ್ಡಾಯ ಸಂಬಂಧ ರಾಜ್ಯಪಾಲರು ಮಸೂದೆಯನ್ನು ಸದನದಲ್ಲಿ ಮಂಡಿಸಿ, ಅನುಮೋದನೆ ಪಡೆಯುವಂತೆ ತಿಳಿಸಿದ್ದಾರೆ. ಮುಂದಿನ ಅಧಿವೇಶನದಲ್ಲಿ ಮಸೂದೆಯನ್ನು ಮಂಡಿಸಿ, ಅಂಗೀಕಾರ ಪಡೆದು ಕಾನೂನಿನ ರೂಪದಲ್ಲಿ ಜಾರಿ ಮಾಡುತ್ತೇವೆ. ಈ ವಿಚಾರದಲ್ಲಿ ನಮ್ಮ ನಿಲುವು ಅಚಲವಾಗಿದೆ’ ಎಂದು ಅವರು ಹೇಳಿದ್ದಾರೆ.