ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

WhatsApp
Telegram
Facebook
Twitter
LinkedIn

 

   ದಾವಣಗೆರೆ :ದಾವಣಗೆರೆ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 5 ಶಿಶು ಅಭಿವೃದ್ದಿ ಯೋಜನೆಗಳ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿ ಇರುವ 35 ಅಂಗನವಾಡಿ ಕಾರ್ಯಕರ್ತೆಯರು, 4 ಮಿನಿ ಅಂಗನವಾಡಿ ಕಾರ್ಯಕರ್ತೆ ಹಾಗೂ 198 ಅಂಗನವಾಡಿ ಸಹಾಯಕಿಯರ ಗೌರವ ಸೇವೆಯ ಹುದ್ದೆಗಳಿಗೆ ನೇಮಕ ಮಾಡಲು ಅರ್ಹ ಮಹಿಳಾ ಹಾಗೂ ಲಿಂಗತ್ವ ಅಲ್ಪಸಂಖ್ಯಾತ ಮಹಿಳಾ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 9 ಕೊನೆಯದಿನ. ಅರ್ಜಿಯನ್ನು ವೆಬ್ ಸೈಟ್ http://karnemakaone.kar.nic.in/abcd/ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದಾವಣಗೆರೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ:08192-263219, ಹರಿಹರ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ: 08192-241431, ಜಗಳೂರು ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ: 08196-227132, ಹೊನ್ನಾಳಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ: 08188-251283, ಚನ್ನಗಿರಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿ ದೂ.ಸಂ: 08189-228010 ನ್ನು ಸಂಪರ್ಕಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ಉಪನಿರ್ದೇಶಕ ರಾಜಾನಾಯ್ಕ ತಿಳಿಸಿದ್ದಾರೆ.

BC Suddi   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon