ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮೇ 15ರಂದು ನಡೆದ ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಸಿಐಡಿ ತನಿಖೆಗೆ ವಹಿಸಿದೆ. ಈ ಬಗ್ಗೆ ಖುದ್ದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಮಾಹಿತಿ ನೀಡಿದ್ದಾರೆ. ಇಂದು ಇಲ್ಲವೇ ನಾಳೆ ಸಿಐಡಿ ತಂಡ ರಾಜ್ಯಕ್ಕೆ ಆಗಮಿಸಲಿದ್ದಾರೆ. ಅಗತ್ಯ ಮಾಹಿತಿ ಸಂಗ್ರಹಿಸಿ ತನಿಖೆ ನಡೆಸಲಿದ್ದಾರೆ.
ಮಂಗಳವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಬೆಂಗಳೂರಿಗೆ ಆಗಮಿಸಿದರು. ನೆನ್ನೆ ಸೋಮವಾರ ಬೆಳಗ್ಗೆ ಅವರು ಹುಬ್ಬಳ್ಳಿಗೆ ಭೇಟಿ ನೀಡಿ ಕಾನೂನು ಸುವ್ಯವಸ್ಥೆ ಪರಿಶೀಲಿಸಿದರು. ತಿಂಗಳ ಅಂತರದಲ್ಲಿ ಕೊಲೆಯಾದ ನೇಹಾ ಹಾಗೂ ಅಂಜಲಿ ಅವರ ಮನೆಗೆ ಭೇಟಿ ಕೊಟ್ಟು ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.
ಈ ವೇಳೆ ಸುದ್ದಿಗಾರರ ಜೊತೆ ಮಾತನಾಡಿ ಅವರು, ನಿಷ್ಪಕ್ಷಪಾತವಾಗಿ ತನಿಖೆಯಾಗಬೇಕು ಎಂಬ ಉದ್ದೇಶದಿಂದ ಈ ಎರಡು ಕೊಲೆ ಪ್ರಕರಣಗಳನ್ನು ಸಿಐಡಿಗೆ ವಹಿಸಲಾಗಿದೆ. ಸ್ಥಳೀಯ ಪೊಲೀಸರು ಒತ್ತಡಕ್ಕೆ ಒಳಗಾಗಿದ್ದಾರೆ ಎಂಬ ಆರೋಪಗಳು ಬರಬಹುದು. ಹೀಗಾಗಿ ಸಿಐಡಿಗೆ ವಹಿಸಲಾಗಿದೆ ಎಂದು ತಿಳಿಸಿದರು.