ಬೆಂಗಳೂರು: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಅಕ್ಟೋಬರ್ 10ರಿಂದ 3 ದಿನಗಳ ಕಾಲ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ. ಇನ್ನೂ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.