ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 1000 ಗ್ರಾಮಾಡಳಿತ ಅಧಿಕಾರಿ ಹುದ್ದೆಗಳು ನೇಮಕಾತಿಗೆ ಅಕ್ಟೋಬರ್ 26ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆಯ ಕೀ ಉತ್ತರಗಳನ್ನು ಪ್ರಕಟಿಸಿದೆ.
ಪರೀಕ್ಷೆ ಬರೆದ ಅಭ್ಯರ್ಥಿಗಳು ಕೆಇಎ ವೆಬ್‌ಸೈಟ್https://cetonline.karnataka.gov.in/kea/vacrec24 ನಲ್ಲಿ ಕೀ ಉತ್ತರಗಳನ್ನು ನೋಡಬಹುದು. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಣೆ ಹೊರಡಿಸಿದೆ. ಕಂದಾಯ ಇಲಾಖೆಯಲ್ಲಿನ ಗ್ರಾಮ ಆಡಳಿತ ಅಧಿಕಾರಿ ಮತ್ತು ಜಿಟಿಟಿಸಿ ಸಂಸ್ಥೆಯಲ್ಲಿನ ವಿವಿಧ ಹುದ್ದೆಗಳ ಆಯ್ಕೆಗೆ ಅ.26ರಂದು ಕಡ್ಡಾಯ ಕನ್ನಡ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯ ಕೀ ಉತ್ತರಗಳನ್ನು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಕೀ ಉತ್ತರಗಳಲ್ಲಿ ಏನಾದರೂ ಅಕ್ಷೇಪಣೆಗಳಿದ್ದರೆ ಅ.29ರ ಸಂಜೆ 5.30ರೊಳಗೆ ಸಲ್ಲಿಸಬೇಕು. ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆಗಳ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು ಪಿಡಿಎಫ್ ರೂಪದಲ್ಲಿ ಸಲ್ಲಿಸಬೇಕು. ಪ್ರತಿ ಆಕ್ಷೇಪಣೆಗೂ 50 ರೂ. ಸಲ್ಲಿಸಬೇಕು ಎಂದು ಕೆಇಎ ಪ್ರಕಟಣೆಯಲ್ಲಿ ತಿಳಿಸಿದೆ