ಅಕ್ರಮ ಮರಳು ಗಣಿಗಾರಿಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರ ಇನ್ನು ಮುಂದೆ ಆನ್‌ಲೈನ್ ಮೂಲಕ ಮರಳು ಮಾರಾಟ ಮಾಡುವುದಾಗಿ ಘೋಷಣೆ ಮಾಡಿದೆ.
ಈ ಬಗ್ಗೆ ಮಾಹಿತಿ ಹೊರಡಿಸಿರುವ ಮಹಾರಾಷ್ಟ್ರದ ಕಂದಾಯ ಸಚಿವ ರಾಧಾಕೃಷ್ಣ ವಿಖೆ ಪಾಟೀಲ್ ಅವರು,ರಾಜ್ಯದಲ್ಲಿ ದಿನದಿಂದ ದಿನಕ್ಕೆ ಅಕ್ರಮ ಮರಳುಗಾರಿಕೆ ಹೆಚ್ಚಗುತ್ತಿದ್ದು, ಈ ನಿಟ್ಟಿನಿಂದ ರಾಜ್ಯದಲ್ಲಿರುವ ಮರಳು ಗಣಿಗಾರಿಕೆ ನೀತಿಯಲ್ಲಿ ಕೆಲವು ಬದಲಾವಣೆಗಳನ್ನು ತರಲು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನು ಈ ಪ್ರಸ್ತಾವಣೆ ಪ್ರಕಾರ ಆನ್‌ಲೈನ್ ಮೂಲಕ ಮರಳು ಮಾರಾಟ ಮಾಡಲು ನಿರ್ಧರಿಸಿದ್ದೇವೆ. ಇದರಿಂದ ರಾಜ್ಯದ ಜನತೆಗೆ ಕಡಿಮೆ ದರದಲ್ಲಿ ಮರಳು ಲಭ್ಯವಾಗುವುದರ ಜೊತೆಗೆ, ಅಕ್ರಮ ಮರಳು ಗಣಿಗಾರಿಕೆ, ಸಂಗ್ರಹ ಸಮಸ್ಯೆಗೂ ಪರಿಹಾರ ದೊರೆಯಲಿದೆ ಎಂದಿದ್ದಾರೆ.