ಅತಿಶಿ ಮುಂದಿನ ದೆಹಲಿ ಸಿಎಂ- ಅರವಿಂದ್ ಕೇಜ್ರಿವಾಲ್ ಹೆಸರು ಪ್ರಸ್ತಾಪ

ನವದೆಹಲಿ :ದೆಹಲಿ ನೂತನ ಸಿಎಂ ಸ್ಥಾನಕ್ಕೆ ಸಚಿವೆ ಅತಿಶಿ ಅವರ ಹೆಸರನ್ನು ಅರವಿಂದ್‌ ಕೇಜ್ರಿವಾಲ್‌ ಪ್ರಸ್ತಾಪಿಸಿದ್ದಾರೆ. ಅತಿಶಿ ಅವರು ದೆಹಲಿ ಎಎಪಿ ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆ ಎಂದು ಎಎಪಿ ಮೂಲಗಳಿಂದ ತಿಳೊಇದು ಬಂದಿದೆ.

ಇಂದು ಮಧ್ಯಾಹ್ನ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರನ್ನು ಭೇಟಿಯಾದ ನಂತರ ಅರವಿಂದ್ ಕೇಜ್ರಿವಾಲ್ ಅವರು ಉನ್ನತ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ, ದೆಹಲಿ ಸಚಿವ ಅತಿಶಿ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಲಿದ್ದಾರೆ. ಇಂದು ನಡೆದ ಆಮ್ ಆದ್ಮಿ ಪಕ್ಷದ  ನಾಯಕರ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ.

ಇಂದಿನ ಎಎಪಿ ಸಭೆಯಲ್ಲಿ, ಪಕ್ಷದ ನಾಯಕ ದಿಲೀಪ್ ಪಾಂಡೆ ಅವರು, ಸಿಎಂ ಯಾರೆಂದು ಕೇಜ್ರಿವಾಲ್ ನಿರ್ಧರಿಸಬೇಕೆಂದು ಪ್ರಸ್ತಾಪಿಸಿದರು. ಎಎಪಿ ರಾಷ್ಟ್ರೀಯ ಸಂಚಾಲಕರು ಅತಿಶಿ ಅವರ ಹೆಸರನ್ನು ಪ್ರಸ್ತಾಪಿಸಿದಾಗ, ಎಲ್ಲಾ ಎಎಪಿ ಶಾಸಕರು ಎದ್ದು ನಿಂತು ಅದನ್ನು ಒಪ್ಪಿಕೊಂಡರು. ಒಟ್ಟಾರೆ ಎಂಎಸ್ ಅತಿಶಿ ಅವರು ಶಾಸಕಾಂಗ ಪಕ್ಷದ ನಾಯಕಿಯಾಗಿ ಆಯ್ಕೆಯಾಗಿದ್ದಾರೆಂದು ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

Advertisement

ಕ್ಷಣ..ಕ್ಷಣದ ಸುದ್ದಿಗಳಿಗಾಗಿ , ಮೊಬೈಲ್ ನಲ್ಲಿ bcsuddi.com ಓದಿ ಹಾಗೂ ಗೂಗಲ್ ಪ್ಲೇ ಸ್ಟೋರ್ ನಲ್ಲಿ bcsuddi.com ಆಯಪ್ ಡೌನ್ ಲೋಡ್ ಮಾಡಿಕೊಳ್ಳಿ

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement