ಬೆಂಗಳೂರು: ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ನಡೆಯುತ್ತಿದ್ದ ಅಕ್ರಮ ಆಸ್ತಿ ಗಳಿಕೆ ಪ್ರಕರಣದ ಸಿಬಿಐ ತನಿಖೆಯನ್ನು ಹಿಂಪಡೆಯಲು ಕ್ಯಾಬಿನೆಟ್ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಸಚಿವ ಸಂಪುಟದ ಈ ತೀರ್ಮಾನವನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ಬಿಜೆಪಿ ಇದು ಅಧಿಕಾರದ ದುರ್ಬಳಕೆ ಎಂದು ಕಿಡಿ ಕಾರಿದೆ. ರಾಜ್ಯ ಬಿಜೆಪಿ ಮಾಡಿರುವ ಪೋಸ್ಟ್ ಈ ರೀತಿ ಇದೆ. ‘ಸಿಬಿಐ ತನಿಖೆಗೆ ವಹಿಸಿರುವ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಪ್ರಕರಣವನ್ನು ಸಚಿವ ಸಂಪುಟ ಹಿಂಪಡೆಯುವ ನಿರ್ಧಾರ ಮಾಡಿರುವುದು ಪ್ರಜಾಪ್ರಭುತ್ವಕ್ಕೆ ಮಾಡಿದ ಅಪಮಾನ. ಕಾನೂನು ಎಲ್ಲರಿಗೂ ಒಂದೇ, ಪ್ರಕರಣದ ವಿಚಾರಣೆ ಅಂತಿಮ ಹಂತ ತಲುಪಿದ್ದು, ತೀರ್ಪು ಬರುವ ಮೊದಲೇ ಅಧಿಕಾರ ದುರ್ಬಳಕೆ ಮಾಡಿ ಕೇಸು ಮುಚ್ಚಿ ಹಾಕುವ ಪ್ರಯತ್ನ ಒಳ್ಳೆಯದಲ್ಲ.’ ಈ ರೀತಿ ಸಾಮಾಜಿಕ ಜಾಲತಾಣ ‘ಎಕ್ಸ್’ನಲ್ಲಿ ಬರೆದುಕೊಂಡಿರುವ ರಾಜ್ಯ ಬಿಜೆಪಿಯು ಸರಕಾರದ ನಡೆಯನ್ನು ಖಂಡಿಸಿದೆ.