ಅನಧಿಕೃತ ಬೃಹತ್ ಜಾಹೀರಾತು ಫಲಕವೊಂದು ಬಿದ್ದು 14 ಮಂದಿ ಸಾವು.!

 

ಮುಂಬೈ: ಮುಂಬೈನಲ್ಲಿ ಅನಧಿಕೃತ ಬೃಹತ್ ಜಾಹೀರಾತು ಫಲಕವೊಂದು ಪೆಟ್ರೋಲ್ ಪಂಪ್ ಮೇಲೆ ಬಿದ್ದ ಪರಿಣಾಮದಿಂದ 14ಕ್ಕೆ ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಈ  ಘಟನೆಯಲ್ಲಿ 74 ಜನ ಗಾಯಗೊಂಡಿದ್ದಾರೆ.. ಆಸ್ಪತ್ರೆಗೆ ದಾಖಲಾಗಿದ್ದ ಗಾಯಾಳುಗಳಲ್ಲಿ 35 ಜನ ಬಿಡುಗಡೆಗೊಂಡಿದ್ದು, ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಪರಿಹಾರ ಕಾರ್ಯಾಚರಣೆ ಮುಂದುವರೆದಿದೆ.

Advertisement

ಮಧ್ಯಾಹ್ನ ಇದ್ದಕ್ಕಿದ್ದಂತೆ ದೂಳು ಸಹಿತ ಭಾರಿ ಬಿರುಗಾಳಿ ಬೀಸಿತು. ಈ ವೇಳೆ ಘಾಟ್ಕೋಪರ್ ಪ್ರದೇಶದ ಚೆಡ್ಡಾನಗರದಲ್ಲಿ 100 ಅಡಿ ಎತ್ತರದ ಜಾಹೀರಾತು ಫಲಕವು ಪೆಟ್ರೋಲ್ ಪಂಪ್ ಮೇಲೆ ಬಿದ್ದಿತ್ತು.

ಸ್ಥಳದಲ್ಲಿದ್ದ, ಹಲವರು ಫಲಕದಡಿ ಸಿಲುಕಿಕೊಂಡಿ ದ್ದರು. ಕೂಡಲೇ ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement