‘ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು’- ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

WhatsApp
Telegram
Facebook
Twitter
LinkedIn

ಬೆಂಗಳೂರು : ಅನರ್ಹರ ಬಿಪಿಎಲ್ ಕಾರ್ಡ್ ಗಳನ್ನು ಮಾತ್ರ ರದ್ದು ಮಾಡಲಾಗುವುದು. ಅರ್ಹ ಬಡವರಿಗೆ ಕಾರ್ಡು ತಪ್ಪಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಸ್ಪಷ್ಟಪಡಿಸಿದರು.

ಅವರು ಇಂದು ಕನಕ ಜಯಂತಿ ಪ್ರಯುಕ್ತ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾಧ್ಯಮದೊಂದಿಗೆ ಮಾತನಾಡಿದರು.ಅನ್ನಭಾಗ್ಯ ಯೋಜನೆಯನ್ನು ಜಾರಿ ಮಾಡಿದ್ದು ನಾವೇ ಹೊರತು, ಬಿಜೆಪಿಯಾಗಲಿ ಜೆಡಿಎಸ್ ಆಗಲಿ ನೀಡಿಲ್ಲ.ಕಾರ್ಯಕ್ರಮ ಜಾರಿ ಮಾಡಿದ್ದು ಈ ಸಿದ್ದರಾಮಯ್ಯ. 2017ರಲ್ಲಿ ಒಂದು ರೂಪಾಯಿಗೆ ನೀಡುತ್ತಿದ್ದ ಅಕ್ಕಿಯನ್ನು ಉಚಿತವಾಗಿ ನೀಡಲಾಯಿತು. ಇದನ್ನು ಬಿಜೆಪಿ ಮಾಡಿಲ್ಲ. ಸುಮ್ಮನೆ ಮಾತನಾಡುತ್ತಾರೆ. ಬಿಜೆಪಿ ಅಧಿಕಾರದಲ್ಲಿರುವ ಯಾವ ರಾಜ್ಯದಲ್ಲಿ ಇಂಥ ಯೋಜನೆಯನ್ನು ಜಾರಿ ಮಾಡಿದ್ದಾರೆ. ಗುಜರಾತ್, ಮಧ್ಯಪ್ರದೇಶ, ಬಿಹಾರ, ಉತ್ತರ ಪ್ರದೇಶ, ಹರಿಯಾಣ ಎಲ್ಲಿ ಮಾಡಿದ್ದಾರೆ ಹೇಳಿ ಎಂದು ಪ್ರಶ್ನಿಸಿದರು.

ಏಕಾಏಕಿ ಬಿಪಿಎಲ್ ಕಾರ್ಡುಗಳನ್ನು ಕಡಿತಗೊಳಿಸಲಾಗಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ಅರ್ಹರಿಗೆ ತಪ್ಪಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸರ್ಕಾರ ಕೇವಲ ಗ್ಯಾರಂಟಿ ಎನ್ನುತ್ತಿದೆ ತೆರಿಗೆ ಹಣ ಎಲ್ಲಿ ಹೋಗುತ್ತಿದೆ ಎಂದು ಜನರಿಗೆ ಉತ್ತರ ನೀಡಬೇಕು ಎಂದು ಹೇಳಿಕೆ ನೀಡಿರುವ ಬಗ್ಗೆ ಮಾತನಾಡಿ ಕುಮಾರಸ್ವಾಮಿ ಇರುವಾಗ ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದರೆ? ಅವರಿಗೆ ಮಾತನಾಡಲು ಯಾವ ನೈತಿಕ ಹಕ್ಕಿದೆ ಎಂದರು.

 

BC Suddi   About Us
For Feedback - [email protected]

Related News

LATEST Post

WhatsApp Icon Telegram Icon