ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರನ್ನು ಚುನಾವಣೆಯಲ್ಲಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಸಂಸದ ಸ್ಥಾನದಿಂದ ಅನರ್ಹಗೊಳಿಸಿದ್ದು, ಈ ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಕೋರಿ ಹೈಕೋರ್ಟ್‌ಗೆ ಪ್ರಜ್ವಲ್ ರೇವಣ್ಣ ಮನವಿ ಸಲ್ಲಿಸಿದ್ದಾರೆ.
ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವವರೆಗೂ, ಅಸಿಂಧು ಆದೇಶಕ್ಕೆ ಮಧ್ಯಂತರ ತಡೆ ನೀಡುವಂತೆ ಕೋರಿ ಪ್ರಜ್ವಲ್ ರೇವಣ್ಣ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಇನ್ನು ಪ್ರಜ್ವಲ್ ರೇವಣ್ಣ ಅವರು ಚುನಾವಣೆಯಲ್ಲಿ ಅಕ್ರಮ ನಡೆಸಿ ಗೆಲುವು ಸಾಧಿಸಿದ್ದಾರೆ. ಅವರ ಸದಸ್ಯತ್ವವನ್ನು ಅನೂರ್ಜಿತಗೊಳಿಸಬೇಕು ಎಂದು ಕೋರಿ ದೇವರಾಜೇಗೌಡ ಅರ್ಜಿ ಸಲ್ಲಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಸಂಸದ ಸ್ಥಾನದಿಂದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಲಾಗಿದೆ.