ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಸಹಾಯಕ ಅಶೋಕ್ ಕುಮಾರ್ ಪಾಲ್ ಅವರನ್ನು ಬಂಧಿಸಲಾಗಿದೆ.
ರಿಲಯನ್ಸ್ ಗ್ರೂಪ್ ಅಧ್ಯಕ್ಷ ಅನಿಲ್ ಅಂಬಾನಿ ಅವರ ಸಹಾಯಕ ಮತ್ತು ರಿಲಯನ್ಸ್ ಪವರ್ ಲಿಮಿಟೆಡ್ನ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಪಾಲ್ ಅವರನ್ನು 17,000 ಕೋಟಿ ರೂ. ಬ್ಯಾಂಕ್ ಸಾಲ ವಂಚನೆಗೆ ಸಂಬಂಧಿಸಿದ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಮಾಡಲಾಗಿದೆ.
ಪಾಲ್ ಅವರು 25 ವರ್ಷಗಳಿಗೂ ಹೆಚ್ಚು ಚಾರ್ಟರ್ಡ್ ಅಕೌಂಟೆಂಟ್ ಆಗಿ ಅನುಭವ ಹೊಂದಿದ್ದಾರೆ. ಏಳು ವರ್ಷಗಳಿಗೂ ಹೆಚ್ಚು ಕಾಲ ರಿಲಯನ್ಸ್ ಪವರ್ನಲ್ಲಿ ಮುಖ್ಯ ಹಣಕಾಸು ಅಧಿಕಾರಿಯಾಗಿ ಕೆಲಸ ಮಾಡುತ್ತಿದ್ದಾರೆ.
ಕೆಲವು ಕಂಪನಿಗಳಿಂದ ಕೋಟ್ಯಂತರ ರೂಪಾಯಿಗಳ ಆರ್ಥಿಕ ಅಕ್ರಮಗಳ ಹಲವಾರು ಆರೋಪಗಳ ಹೊರತಾಗಿ, ಬ್ಯಾಂಕ್ ಸಾಲ ವಂಚನೆ-ಸಂಬಂಧಿತ ಹಣ ವರ್ಗಾವಣೆ ಪ್ರಕರಣದ ಭಾಗವಾಗಿ ತನಿಖಾ ಸಂಸ್ಥೆ ಈ ವರ್ಷದ ಜುಲೈನಲ್ಲಿ ದಾಳಿ ನಡೆಸಲಾಗಿತ್ತು.
ಆಗಸ್ಟ್ನಲ್ಲಿ ಬಿಸ್ವಾಲ್ ಟ್ರೇಡ್ಲಿಂಕ್ ಪ್ರೈವೇಟ್ ಲಿಮಿಟೆಡ್ನ ವ್ಯವಸ್ಥಾಪಕ ನಿರ್ದೇಶಕ ಪಾರ್ಥ ಸಾರಥಿ ಬಿಸ್ವಾಲ್ ಅವರನ್ನು 68.2 ಕೋಟಿ ರೂ. ಮೌಲ್ಯದ ನಕಲಿ ಗ್ಯಾರಂಟಿಗಳನ್ನು ಸಲ್ಲಿಸಿದ್ದಕ್ಕಾಗಿ ಬಂಧಿಸಲಾಗಿತ್ತು.