‘ಅಪಪ್ರಚಾರದಿಂದ ನಾವು ಯಾರೂ ಹತಾಶರಾಗಬಾರದು, ಸಕಾರಾತ್ಮಕವಾಗಿರಿ’-ಕಾರ್ಯಕರ್ತರಿಗೆ ಸಿಎಂ ಕಿವಿಮಾತು

ಬೆಂಗಳೂರು: ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳನ್ನು ರಚಿಸಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಘೋಷಣೆ ಮಾಡಿದರು.

ಅವರು ಇಂದು ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಸಭೆಯಲ್ಲಿ ಮಾತನಾಡಿ, ವಿಧಾನಸಭೆಯಲ್ಲಿಯೂ ಒಂದು ಸಮಿತಿ ಇರಲಿದ್ದು, ರಾಜ್ಯಮಟ್ಟದಲ್ಲಿ ಅಧ್ಯಕ್ಷರು, ಐದು ಜನ ಉಪಾಧ್ಯಕ್ಷರು ಇರಲಿದ್ದಾರೆ. ಅಧ್ಯಕ್ಷರಾದವರಿಗೆ ಸಂಪುಟ ದರ್ಜೆ ಸ್ಥಾನಮಾನ ಇರಲಿದೆ. ಉಪಾಧ್ಯಕ್ಷರಿಗೆ ರಾಜ್ಯ ಸಚಿವ ಸ್ಥಾನ ನೀಡಲಾಗುವುದು ಎಂದರು.

ಸುಮಾರು 31 ಜನ ಸದಸ್ಯರು ಇರಲಿದ್ದು ಇವರೆಲ್ಲರೂ ಕಾರ್ಯಕರ್ತರು. 31 ಜಿಲ್ಲಾ ಮಟ್ಟದಲ್ಲಿ ಒಬ್ಬ ಅಧ್ಯಕ್ಷರು ಹಾಗೂ ಉಪಾಧ್ಯಕ್ಷ ರು ಹಾಗೂ ಸದಸ್ಯರು ಇರಲಿದ್ದಾರೆ. ಅವರಿಗೆ ಕಚೇರಿ ವ್ಯವಸ್ಥೆ ಹಾಗೂ ಗೌರವ ಧನ ನೀಡುವ ವ್ಯವಸ್ಥೆ ಆಗಲಿದೆ ಹಾಗೂ 50 ಸಾವಿರ ರೂ.ಗಳನ್ನು ಪ್ರತಿ ತಿಂಗಳು ನೀಡಲಾಗುವುದು.
21 ಸದಸ್ಯರು ಇರಲಿದ್ದು, 224 ಕ್ಷೇತ್ರಗಳಲ್ಲಿ ಅಧ್ಯಕ್ಷರು ಹಾಗೂ 11 ಸದಸ್ಯರು ಇರಲಿದ್ದಾರೆ ಇವರಿಗೆ ಗೌರವ ಧನ ಹಾಗೂ ಸಿಟ್ಟಿಂಗ್ ಫೀಸ್ ಸಹ ಒದಗಿಸಲಾಗುವುದು ಈ ಮೊತ್ತವನ್ನು ರಾಜ್ಯ ಖಜಾನೆಯಿಂದ ಭರಿಸಲಾಗುವುದು ಎಂದರು.

Advertisement

ಸರ್ಕಾರಕ್ಕೆ ಇದು ದೊಡ್ಡ ಹೊರೆಯೇನಲ್ಲ. ಪರಿಣಾಮಕಾರಿಯಾಗಿ ಗ್ಯಾರಂಟಿ ಗಳ ಅನುಷ್ಠಾನವಾಗಬೇಕು ಎಂಬ ಕಾರಣಕ್ಕೆ 16 ಕೋಟಿ ರೂ.ಗಳನ್ನು ಭರಿಸುತ್ತೇವೆ. ಅಪಪ್ರಚಾರಕ್ಕೆ ಉತ್ತರ ಕೊಡಲು ಈ ಸಮಿತಿಗಳನ್ನು ರಚಿಸಲಾಗುತ್ತಿದೆ ಎಂದರು.

ಕಾರ್ಯಕರ್ತರಿಗೆ, ಶಾಸಕರಲ್ಲದವರಿದೆ, ಸಂಸದರಲ್ಲದವರಿಗೆ, ಸಮಿತಿ ಸದಸ್ಯತ್ವ ದೊರೆಯಲಿದೆ. ವಿವಿಧ ಇಲಾಖೆಗಳ ಸಮಿತಿಗಳನ್ನು ಕೂಡಲೇ ರಚಿಸಲು ಆಯಾ ಇಲಾಖೆಗಳ ಸಚಿವರ ವಿವೇಚನೆಗೆ ಬಿಡಲಾಗಿದೆ. ಹೆಸರುಗಳನ್ನು ಪಡೆಯುವಾಗ, ನಮ್ಮ ಶಾಸಕರು, ಸಂಸದರ ಸಲಹೆ ಪಡೆಯುವಂತೆ ಸೂಚಿಸಿದರು. ಕೆಲವು ಶಾಸಕರಿಗೆ , ವಿಧಾನಸಭೆ ಟಿಕೆಟ್ ದೊರೆಯದವರಿಗೆ ಅವಕಾಶ ಕಲ್ಪಿಸಲಾಗುವುದು. ಎರಡು ವರ್ಷಗಳ ಅವಧಿ ಇರಲಿದೆ . ಕಾರ್ಯಕರ್ತರ ಶ್ರಮದಿಂದ ಪಕ್ಷ ಗಟ್ಟಿಯಾಗಿದೆ ಎಂದರು.

ಭಾರತ್ ಜೋಡೋ ನ್ಯಾಯ ಯಾತ್ರಾ:
ಲೋಕಸಭಾ ಚುನಾವಣೆ ಗೆಲ್ಲಲು ನಾವೆಲ್ಲರೂ ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು. ರಾಹುಲ್ ಗಾಂಧಿ ಅವರು 14 ನೇ ತಾರೀಖಿನಿಂದ 14 ರಾಜ್ಯಗಳಲ್ಲಿ 85 ಜಿಲ್ಲೆಗಳಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರಾ ಕೈಗೊಳ್ಳಲಿದ್ದಾರೆ.

ಸಕಾರಾತ್ಮಕವಾಗಿರಿ: ಸಿಎಂ ಕಿವಿಮಾತು

ಚುನಾವಣೆಯನ್ನು ನಾವು ಗೆಲ್ಲಲೇ ಬೇಕು. ಇಷ್ಟೆಲ್ಲಾ ಮಾಡಿಯೂ ನಾವು ಗೆಲ್ಲದೆ ಹೋದರೆ ಅದು ನಮಗೆ ಹಿನ್ನಡೆಯಾಗಲಿದೆ. ನಾವು ಗೆಲ್ಲಲೇಬೇಕು. 28 ಕ್ಕೆ 28 ಸೀಟನ್ನು ಗೆಲ್ಲಬೇಕು. ಕನಿಷ್ಠ 26 ಸೀಟು ಗೆಲ್ಲಬೇಕು. ಜನರ ನಾಡಿ ಮಿಡಿತ ನಮ್ಮ ಪರವಾಗಿರುವುದರಿಂದ ಅಪಪ್ರಚಾರದಿಂದ ನಾವು ಯಾರೂ ಹತಾಶರಾಗಬಾರದು. ಸಕಾರಾತ್ಮಕವಾಗಿರಬೇಕು ಎಂದು ಸಿಎಂ ಕಿವಿಮಾತು ಹೇಳಿದರು.

Keep Up to Date with the Most Important News

By pressing the Subscribe button, you confirm that you have read and are agreeing to our Privacy Policy and Terms of Use
Advertisement