ಅಪಾರ್ಟ್ ಮೆಂಟ್ ನಿಂದ ಬಿದ್ದು ಸಾವನಪ್ಪಿದ ಭಾರತ ಕ್ರಿಕೆಟ್ ತಂಡದ ಮಾಜಿ ವೇಗದ ಬೌಲರ್ ಡೇವಿಡ್ ಜಾನ್ಸನ್

WhatsApp
Telegram
Facebook
Twitter
LinkedIn

ಬೆಂಗಳೂರು : ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಡೇವಿಡ್ ಜಾನ್ಸನ್ ಅಪಾರ್ಟ್ ಮೆಂಟ್ ನಿಂದ ಬಿದ್ದು ಸಾವನಪ್ಪಿದ್ದಾರೆ. ಅವರಿಗೆ 52 ವರ್ಷ ವಯಸ್ಸಾಗಿತ್ತು.  ಕೊತ್ತನೂರು ಬಳಿ ಇರುವ ಅಪಾರ್ಟ್ಮೆಂಟ್ ಬಾಲ್ಕನಿಯಿಂದ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.

ಡೇವಿಡ್ ಜಾನ್ಸನ್ ಅವರು 1996ರಲ್ಲಿ ಭಾರತ ಪರ 2 ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್​ ಸರಣಿ ಇದಾಗಿತ್ತು. ಬ್ಯಾಟಿಂಗ್ ಆಲ್​ರೌಂಡರ್​ ಆಗಿದ್ದ ಅವರು ಟೆಸ್ ನಲ್ಲಿ 8 ರನ್​ ಮತ್ತು 3 ವಿಕೆಟ್​ ಕಿತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿ ಅವರಿಗೆ ಭಾರತ ಪರ ಕೊನೆಯ ಪಂದ್ಯವಾಗಿತ್ತು. ಇದಾದ ಬಳಿಕ ಅವರಿಗೆ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ. ಕುಡಿತದ ಚಟ ಹೊಂದಿದ್ದ ಡೇವಿಡ್ ಜಾನ್ಸನ್ ಕೆಲ ವರ್ಷಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದರು.  ಕೆಪಿಎಲ್​ ನಲ್ಲಿ ಬೆಳಗಾವಿ ಪ್ಯಾಂಥರ್ಸ್ ಪರವಾಗಿ ಆಟವಾಡಿದ್ದರು.1971ರ ಅಕ್ಟೋಬರ್ 16ರಂದು ಹಾಸನ ಜಿಲ್ಲೆಯ ಅರಸಿಕೆರೆಯಲ್ಲಿ ಜನಿಸಿದ ಡೇವಿಡ್ ಜಾನ್ಸನ್, 90ರ ಕಾಲಘಟ್ಟದಲ್ಲಿ ಅತಿವೇಗದ ಬೌಲಿಂಗ್ ಮಾಡಿದ್ದರು. ಆಸೀಸ್​ ವಿರುದ್ಧದ ಪಂದ್ಯದಲ್ಲಿ ಗಂಟೆಗೆ 157.8 ಕಿಲೋ ಮೀಟರ್ ವೇಗದಲ್ಲಿ ಬೌಲಿಂಗ್ ಮಾಡಿ ಆಸ್ಟ್ರೇಲಿಯಾದ ಮೈಕಲ್ ಸ್ಲೇಟರ್ ಅವರ ವಿಕೆಟ್​ ಕಿತ್ತಿದ್ದರು. ಡೇವಿಡ್ ಜಾನ್ಸನ್ ಅವರ ನಿಧನಕ್ಕೆ ಕ್ರಿಕೆಟ್ ನ   ಮಾಜಿ ಆಟಗಾರರು ಕಂಬನಿ ಮಿಡಿದಿದ್ದಾರೆ.

BC Suddi   About Us
For Feedback - [email protected]

Related News

LATEST Post

WhatsApp

Don’t Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.

Powered By KhushiHost

WhatsApp Icon Telegram Icon