ಬೆಳಗಾವಿ : ಬೆಳಗಾವಿಯಲ್ಲಿ ಅಪ್ರಾಪ್ತ ಬಾಲಕಿ ಮೇಲೆ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಬಹಳ ದಿನದ ಹಿಂದೆ ನಡೆದಿರುವ ಘಟನೆ ತಡವಾಗಿ ಗೊತ್ತಾಗಿದೆ, ಹಾಗಾಗಿ ಪ್ರಕರಣ ದಾಖಲಾಗಿರಲಿಲ್ಲ. ಈಗ ದೂರು ಕೊಟ್ಟಿದ್ದಾರೆ , ಪೊಲೀಸರು ಐವರನ್ನು ಬಂಧಿಸಿದ್ದಾರೆ. ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲು ಕಮಿಷನರ್ ಗೆ ಸೂಚನೆ ನೀಡಿದ್ದೇವೆ ಎಂದರು.
ಬೆಳಗಾವಿ ತಾಲೂಕಿನ ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಆರು ಜನ ಕಾಮುಕರು ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾರೆ. ಆರು ತಿಂಗಳ ಹಿಂದೆ ಸಾಮೂಹಿಕ ಅತ್ಯಾಚಾರ ನಡೆಸಿ ವಿಡಿಯೋ ಮಾಡಿಕೊಂಡಿದ್ದ ದುಷ್ಕರ್ಮಿಗಳು ವಿಡಿಯೋ ತೋರಿಸಿ ಬ್ಲಾಕ್ ಮೇಲ್ ಮಾಡಿ ಮತ್ತೊಮ್ಮೆ ಅತ್ಯಾಚಾರ ಎಸಗಿದ್ದಾರೆ . ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.