ನವದೆಹಲಿ: ರದ್ದಾಗಿರುವ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಡಿ. 21 ರಂದು ವಿಚಾರಣೆಗೆ ಹಾಜರಾಗಲು ಜಾರಿ ನಿರ್ದೇಶನಾಲಯವು ( ಇ.ಡಿ) ದೆಹಲಿ ಸಿಎಂ ಅರವಿಂದ್ ಕ್ರೇಜಿವಾಲ್ ಅವರಿಗೆ ಇಂದು ಸಮಸ್ಸ್ ಜಾರಿ ಮಾಡಿದೆ.
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಇಂದು ಎರಡನೇ ಬಾರಿ ದೆಹಲಿ ಸಿಎಂಗೆ ಸಮನ್ಸ್ ಜಾರಿ ಮಾಡಿದ್ದು, ಈ ಹಿಂದೆ ನ. 2 ರಂದು ಕೇಜ್ರಿವಾಲ್ ಅವರಿಗೆ ಇಡಿ ಸಮನ್ಸ್ ನೀಡಿತ್ತು.
ಆದರೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ಪಂಜಾಬ್ ಮುಖ್ಯಮಂತ್ರಿ ಭಗವಂತ ಮಾನ್ ಅವರೊಂದಿಗೆ ರ್ಯಾಲಿಯಲ್ಲಿ ಪಾಲ್ಗೊಳ್ಳುತ್ತಿರುವ ನೆಪವೊಡ್ಡಿ ವಿಚಾರಣೆಗೆ ಹಾಜರಾಗಿರಲಿಲ್ಲ.
ಈಗ ಇನ್ನೊಂದು ಬಾರಿ ಎಎಪಿಯ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಅವರಿಗೆ ಇಡಿ ಸಮನ್ಸ್ ನೀಡಿದ್ದು, ದೆಹಲಿ ಅಬಕಾರಿ ನೀತಿ ಪ್ರಕರಣದ ಬಗ್ಗೆ ಪ್ರಶ್ನಿಸಲು ಮತ್ತು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಅವರ ಹೇಳಿಕೆ ದಾಖಲಿಸಿಕೊಳ್ಳಲು ಸಮನ್ಸ್ ನೀಡಲಾಗಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.