ದೆಹಲಿ : ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನಕ್ಕೊಳಗಾಗಿರುವ ಬಿಆರ್ಎಸ್ ನಾಯಕಿ ಕೆ ಕವಿತಾ ಅವರ ಮಧ್ಯಂತರ ಜಾಮೀನು ಅರ್ಜಿಯನ್ನು ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಸೋಮವಾರ ವಜಾಗೊಳಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಕವಿತಾ ಅವರನ್ನು ಕಳೆದ ತಿಂಗಳು ಬಂಧಿಸಿದ್ದರು. ಬಳಿಕ ಅವರು ತಿಹಾರ್ ಜೈಲಿನಲ್ಲಿದ್ದರು. ಇದೀಗ ಜೈಲಿನಲ್ಲಿರುವ ಕವಿತಾಗೆ ಮಧ್ಯಂತರ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದೆ.
ಏಪ್ರಿಲ್ 2 ರಂದು ನ್ಯಾಯಾಲಯ ಅವರನ್ನು 14 ದಿನಗಳ ನ್ಯಾಯಾಂಗ ಬಂಧನದ ಆದೇಶ ನೀಡಿತ್ತು. ಈ ಆದೇಶದಂತೆ ಕವಿತಾ ಅವರು ಏಪ್ರಿಲ್ 15ರವರೆಗೆ ಸೆರೆವಾಸ ಅನುಭವಿಸಲಿದ್ದಾರೆ. ಇನ್ನು ಕವಿತಾ ಅವರು ಮಗನ ಪರೀಕ್ಷೆಯನ್ನು ಉಲ್ಲೇಖಿಸಿ ಮಧ್ಯಂತರ ಜಾಮೀನು ನೀಡುವಂತೆ ನ್ಯಾಯಾಲಯವನ್ನು ಕೋರಿದ್ದರು.