ಅಮೆರಿಕ: ಅಮೆರಿಕದಲ್ಲಿ ಕೇರಳ ಮೂಲದ ದಂಪತಿ ಹಾಗೂ ಅವರ ಅವಳಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಕೊಲೆಯೋ ಅಥವಾ ಆತ್ಮಹತ್ಯೆಯೋ ಎನ್ನುವ ಕುರಿತು ನಿಖರ ಮಾಹಿತಿ ತಿಳಿದು ಬಂದಿಲ್ಲ.
ಆನಂದ್ ಸುಜಿತ್ ಹೆನ್ರಿ ಹಾಗೂ ಪತ್ನಿ ಆಲಿಸ್ ಪ್ರಿಯಾಂಕಾ ಮತ್ತು 4 ವರ್ಷದ ಇಬ್ಬರು ಮಕ್ಕಳು ಮೃತಪಟ್ಟಿದ್ದಾರೆ. ಸಂಬಂಧಿಕರು ಕರೆ ಮಾಡಿದಾಗ ರಿಸೀವ್ ಮಾಡದ ಕಾರಣ ಅವರು ಮನೆಗೆ ಬಂದಿದ್ದಾರೆ. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮನೆಗೆ ಬಂದು ತಪಾಸಣೆ ನಡೆಸಿದಾಗ ದಂಪತಿ ಶವ ಬಾತ್ ರೂಮ್ನಲ್ಲಿ ಕಂಡುಬಂದಿದೆ. ಇಬ್ಬರು ಮಕ್ಕಳು ಕೋಣೆಯಲ್ಲಿ ಶವವಾಗಿದ್ದರು.
ದಂಪತಿ ಮೈಮೇಲೆ ಗುಂಡಿನ ಗುರುತುಗಳಿದ್ದವು. ಬಾತ್ರೂಮ್ನಿಂದ 9 ಎಂಎಂ ಪಿಸ್ತೂಲ್ ಮತ್ತು ಲೋಡ್ ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸದ್ಯದ ಮಾಹಿತಿ.