ಲಕ್ನೋ: ಕೇಂದ್ರ ಸಚಿವೆ ಹಾಗೂ ಬಿಜೆಪಿ ನಾಯಕಿ ಸ್ಮೃತಿ ಇರಾನಿ ಅವರು ಲೋಕಸಭೆ ಚುನಾವಣೆಗೆ ಉತ್ತರ ಪ್ರದೇಶದ ಅಮೇಥಿ ಕ್ಷೇತ್ರದಿಂದ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರನ್ನು ಸೋಲಿಸಿ 2019ರಲ್ಲಿ ಅಮೇಥಿ ಸಂಸದರಾಗಿ ಆಯ್ಕೆಯಾದ ಸ್ಮೃತಿ ಇರಾನಿ, “ಜನರು ಬಿಜೆಪಿಗೆ ಆಶೀರ್ವಾದ ಮಾಡುತ್ತಾರೆ ಎಂಬ ಭರವಸೆ ನನಗಿದೆ” ಎಂದು ಹೇಳಿದರು.
ಪ್ರಮುಖವಾಗಿ, ಕಾಂಗ್ರೆಸ್ ಇನ್ನೂ ತನ್ನ ಅಮೇಥಿ ಅಭ್ಯರ್ಥಿಯನ್ನು ಘೋಷಿಸಿಲ್ಲ. ಪ್ರಿಯಾಂಕಾ ಗಾಂಧಿ ಅವರ ಪತಿ ರಾಬರ್ಟ್ ವಾದ್ರಾ ಅವರನ್ನು ಕಣಕ್ಕಿಳಿಸಬಹುದು ಎಂದು ಊಹಿಸಲಾಗಿದೆ.