ಅಯೋಧ್ಯೆ ರಾಮ ಮಂದಿರದ ನಿರ್ಮಾಣ ಕಾಮಗಾರಿ ಈ ವರ್ಷದ ಡಿಸೆಂಬರ್ ವೇಳೆಗೆ ಪೂರ್ಣಗೊಳಿಸಲಾಗುತ್ತೆ ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಹಿತಿ ನೀಡಿದೆ.
ಅಯೋಧ್ಯೆಯಲ್ಲಿ ಈಗಾಗಲೇ ಸುಮಾರು 1,500 ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಕಾಮಗಾರಿಯನ್ನು ವೇಗಗೊಳಿಸಲು 3,500ಕ್ಕೂ ಹೆಚ್ಚು ಹೆಚ್ಚುವರಿ ಕಾರ್ಮಿಕರನ್ನು ಶೀಘ್ರದಲ್ಲೇ ನಿಯೋಜಿಸಲಾಗುತ್ತೆ ಎಂದು ತೀರ್ಥ ಟ್ರಸ್ಟ್ ತಿಳಿಸಿದೆ.